
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೀಲಾದುನ್ನೆಬಿ ಆಚರಣೆಯ ಹಿನ್ನೆಲೆಯಲ್ಲಿ ಆ.25ರಂದು ಸರ್ಕಾರಿ ಸಾರ್ವತ್ರಿಕ ರಜೆ ನೀಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಸಚಿವ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ.
ರಾಜ್ಯ ಸರ್ಕಾರ ಈ ಹಿಂದೆ ಮೀಲಾದುನ್ನೆಬಿ ರಜೆಯನ್ನು ಆ.26ರಂದು ನಿಗದಿಪಡಿಸಿತ್ತು. ಆದರೆ ಚಂದ್ರದರ್ಶನದಲ್ಲಿ ಉಂಟಾದ ವ್ಯತ್ಯಾಸದಿಂದಾಗಿ ಉಭಯ ಜಿಲ್ಲೆಗಳ ಖಾಝಿಗಳು ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಆ.25ರಂದು ಆಚರಿಸಲು ನಿರ್ಧರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಸ್ಲಿಂ ಸಂಘಟನೆಗಳ ಮುಖಂಡರು ರಜೆಯ ದಿನಾಂಕ ಬದಲಿಸುವಂತೆ ಸಚಿವ ಖಾದರ್ ಅವರಿಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಸಚಿವರು ಆ.25ರಂದು ರಜೆ ಘೋಷಿಸುವಂತೆ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.



















































































