27.4 C
Udupi
Tuesday, August 25, 2026
spot_img
spot_img
HomeBlogಮಣಿಪಾಲ ಆರೋಗ್ಯ ಕಾರ್ಡ್ 2026 : ನೋಂದಣಿಗೆ ಆಗಸ್ಟ್ 31 ಕೊನೆಯ ದಿನ

ಮಣಿಪಾಲ ಆರೋಗ್ಯ ಕಾರ್ಡ್ 2026 : ನೋಂದಣಿಗೆ ಆಗಸ್ಟ್ 31 ಕೊನೆಯ ದಿನ

ಮಣಿಪಾಲ: ಮಣಿಪಾಲ ಆರೋಗ್ಯ ಕಾರ್ಡ್ 2026ರ ನೋಂದಣಿಗೆ ಆಗಸ್ಟ್ 31, 2026 ಕೊನೆಯ ದಿನವಾಗಿದ್ದು, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದ ವತಿಯಿಂದ ಪತ್ರಿಕಾ ಭವನ ದಲ್ಲಿ ನಡೆದಪತ್ರಿಕಾಗೋಷ್ಠಿ ತಿಳಿಸಿದ್ದಾರೆ.

ಸಂಸ್ಥೆಯ ವ್ಯವಸ್ಥಾಪಕರಾದ ಮೋಹನ್ ಶೆಟ್ಟಿ ಮಾತನಾಡಿ
ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯ ಮೂಲಕ ಸದಸ್ಯರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಸೇರಿದಂತೆ ವಿವಿಧ ಆರೋಗ್ಯ ಸೇವೆಗಳಲ್ಲಿ ವಿಶೇಷ ರಿಯಾಯಿತಿ ಸೌಲಭ್ಯಗಳನ್ನು ಪಡೆಯಲು ಅವಕಾಶವಿದೆ. ಈ ಯೋಜನೆಯಡಿ ತಜ್ಞ ವೈದ್ಯರು ಹಾಗೂ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆ, ವಿವಿಧ ವೈದ್ಯಕೀಯ ಪರೀಕ್ಷೆಗಳು, ಡಯಾಲಿಸಿಸ್, ಒಳರೋಗಿ ಸೇವೆಗಳು ಸೇರಿದಂತೆ ಹಲವು ಆರೋಗ್ಯ ಸೇವೆಗಳಲ್ಲಿ ರಿಯಾಯಿತಿ ದೊರೆಯಲಿದೆ ಎಂದರು.

ವಿವಿಧ ಸೇವೆಗಳಲ್ಲಿ ರಿಯಾಯಿತಿ

ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರಿಗೆ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಹಲವು ಸೇವೆಗಳಲ್ಲಿ ವಿಶೇಷ ರಿಯಾಯಿತಿ ನೀಡಲಾಗುತ್ತದೆ. ತಜ್ಞ ಮತ್ತು ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನಾ ಶುಲ್ಕದಲ್ಲಿ ಶೇ.50ರವರೆಗೆ ರಿಯಾಯಿತಿ, ಫಿಸಿಯೋಥೆರಪಿ ಸೇವೆಗಳಲ್ಲಿ ಶೇ.25ರಷ್ಟು ರಿಯಾಯಿತಿ, ರೇಡಿಯಾಲಜಿ ಸೇವೆಗಳು ಹಾಗೂ ಕೆಲವು ವೈದ್ಯಕೀಯ ಪರೀಕ್ಷೆಗಳಲ್ಲಿ ಶೇ.20ರಷ್ಟು ರಿಯಾಯಿತಿ ದೊರೆಯಲಿದೆ ಎಂದರು.

ಡಯಾಲಿಸಿಸ್ ಸೇವೆಯಲ್ಲಿ ಪ್ರತಿ ಚಿಕಿತ್ಸೆಗೆ ₹100 ರಿಯಾಯಿತಿ ಹಾಗೂ ಜನರಲ್ ವಾರ್ಡ್‌ನ ಒಳರೋಗಿ ಸೇವೆಗಳಲ್ಲಿ ಶೇ.25ರಷ್ಟು ರಿಯಾಯಿತಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಾರ್ಡ್ ಸದಸ್ಯರಿಗೆ ಒದಗಿಸಲಾಗುತ್ತದೆ ಎಂದರು.

ಸದಸ್ಯತ್ವ ಶುಲ್ಕ

ಮಣಿಪಾಲ ಆರೋಗ್ಯ ಕಾರ್ಡ್ 2026ರ ಸದಸ್ಯತ್ವಕ್ಕೆ ಮೂರು ವಿಧದ ಆಯ್ಕೆಗಳಿವೆ:

  • ವೈಯಕ್ತಿಕ ಸದಸ್ಯತ್ವ: ವರ್ಷಕ್ಕೆ ₹350
  • ಕುಟುಂಬ ಸದಸ್ಯತ್ವ: ವರ್ಷಕ್ಕೆ ₹700
  • ಕುಟುಂಬ ಪ್ಲಸ್ ಸದಸ್ಯತ್ವ: ವರ್ಷಕ್ಕೆ ₹900

ಕುಟುಂಬ ಸದಸ್ಯತ್ವದಲ್ಲಿ ಸದಸ್ಯರು, ಸಂಗಾತಿ ಹಾಗೂ 25 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅವಿವಾಹಿತ ಮಕ್ಕಳನ್ನು ಒಳಗೊಂಡಿರುತ್ತದೆ. ಕುಟುಂಬ ಪ್ಲಸ್ ಯೋಜನೆಯಲ್ಲಿ ಹೆಚ್ಚುವರಿ ಕುಟುಂಬ ಸದಸ್ಯರನ್ನು ಒಳಗೊಳ್ಳುವ ಅವಕಾಶವಿದೆ.

ಮಣಿಪಾಲ ಆರೋಗ್ಯ ಕಾರ್ಡ್‌ನ ಪ್ರಯೋಜನಗಳನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆ, ಕಾರ್ಕಳದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ, ಮಂಗಳೂರಿನ ಕೆಎಂಸಿ ಆಸ್ಪತ್ರೆ ಸೇರಿದಂತೆ ಮಣಿಪಾಲ ಆರೋಗ್ಯ ವ್ಯವಸ್ಥೆಯ ವಿವಿಧ ಆಸ್ಪತ್ರೆಗಳಲ್ಲಿ ಪಡೆಯಬಹುದಾಗಿದೆ.

ಕಾರ್ಡ್ ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ 88675 79797, 99808 54700 ಅಥವಾ 0820-2923748 ಸಂಪರ್ಕಿಸಬಹುದು. ಆನ್‌ಲೈನ್ ಮಾಹಿತಿಗಾಗಿ manipalhealthcare.com ವೆಬ್‌ಸೈಟ್‌ನ್ನು ಸಂಪರ್ಕಿಸಬಹುದು.

ಮಣಿಪಾಲ ಆರೋಗ್ಯ ಕಾರ್ಡ್ 2026ರ ನೋಂದಣಿಗೆ ಆಗಸ್ಟ್ 31 ಕೊನೆಯ ದಿನವಾಗಿರುವುದರಿಂದ ಸಾರ್ವಜನಿಕರು ನಿಗದಿತ ಅವಧಿಯೊಳಗೆ ನೋಂದಣಿ ಮಾಡಿಕೊಳ್ಳುವಂತೆ ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.

ಸಂಪರ್ಕ:
ನಾರಾಯಣ ನಾಯಕ್ – 9964684643
ಸ್ವೀಟ್ ಮಿಲಾಗ್ರಿಸ್ ಕ್ರೆಡಿಟ್ ಸೊಸೈಟಿ ಸಹಕಾರಿ ಲಿಮಿಟೆಡ್, ಕಾರ್ಕಳ ಮತ್ತು ಇತರ ಸ್ಥಳೀಯ ಸಂಪರ್ಕ ಕೇಂದ್ರಗಳ ಮೂಲಕವೂ ಮಾಹಿತಿ ಪಡೆಯಬಹುದು ಎಂದರು.

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥರಾದ ಸಚಿನ್ ಕಾರಂತ್ ಹಾಗು ವ್ಯವಸ್ಥಾಪಕರಾದ ಮೋಹನ್ ಶೆಟ್ಟಿ , ಆಶ್ಲೋನ್ , ನಟೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page