
ಉಡುಪಿ: ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ, ಮುಳುಗಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ.
ಕುಕ್ಕಿಕಟ್ಟೆ ಶಾಲೆಯ ವಿದ್ಯಾರ್ಥಿ ಆದಿತ್ಯ ನಾಯಕ್ (15) ತನ್ನ ಸಂಬಂಧಿಕರೊಂದಿಗೆ ರಜೆ ಇದ್ದ ದೇವಸ್ಥಾನಕ್ಕೆ ಭೇಟಿ ನೀಡಿದ್ದು ,ದೇವಸ್ಥಾನದಲ್ಲಿ ಕೆಲವು ಭಕ್ತರು ಕೆರೆಯಲ್ಲಿ ಈಜುತ್ತಿದ್ದ ಹಿನ್ನೆಲೆ ಆದಿತ್ಯ ನಾಯಕ್ ಕೂಡ ಈಜಲು ಕೆರೆಗೆ ಇಳಿದಿದ್ದಾನೆ.
ಕೆರೆಯ ಮಧ್ಯಭಾಗದಲ್ಲಿ ಈಜುತ್ತಿದ್ದ ಆದಿತ್ಯ ನಾಯಕ್ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು, ದೇವಸ್ಥಾನದ ತಂಡ ಕೂಡಲೇ ಮುಳುಗುತಜ್ಞ ಈಶ್ವರ ಮಲ್ಪೆ ಅವರಿಗೆ ಮಾಹಿತಿ ನೀಡಿ ಅವರು ಸ್ಥಳಕ್ಕೆ ತೆರಳಿ ಶೋಧ ಕಾರ್ಯ ನಡೆಸಿ ಒಂದು ಗಂಟೆಯ ನಂತರ ಆದಿತ್ಯನನ್ನು ನೀರಿನಿಂದ ಮೇಲಕ್ಕೆ ತೆಗೆದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಆ ವೇಳೆಗೆ ಆದಿತ್ಯ ನಾಯಕ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.





















































































