
ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಆಶ್ರಯದಲ್ಲಿ ಕಾರ್ಕಳದ
ವರ್ಧಮಾನ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ 14 ಮತ್ತು 17ರ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿಯಾದ ಸಾನಿಕ
ಎಸ್. ಪೂಜಾರಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಇವಳು ಕಾರ್ಕಳ ಶಿವಪುರದ ಸತೀಶ್
ಪೂಜಾರಿ ಹಾಗೂ ಉಷಾ ದಂಪತಿಯ ಸುಪುತ್ರಿಯಾಗಿರುತ್ತಾಳೆ. ಸಾಧಕ ವಿದ್ಯಾರ್ಥಿನಿಯನ್ನು ಸಂಸ್ಥೆಯ ಅಧ್ಯಕ್ಷರಾದ ಡಾ.
ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.





















































































