29.2 C
Udupi
Friday, August 28, 2026
spot_img
spot_img
HomeBlogಕಾರ್ಕಳ ಬ್ಲಾಕ್ ಕಾಂಗ್ರೆಸ್ ಮತ್ತು ಹಿಂದುಳಿದ ವರ್ಗಗಳ ಘಟಕ ವತಿಯಿಂದ,

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಮತ್ತು ಹಿಂದುಳಿದ ವರ್ಗಗಳ ಘಟಕ ವತಿಯಿಂದ,

ನಾರಾಯಣಗುರು ಜಯಂತಿ ಆಚರಣೆ ಹಾಗೂ ಸಾಧಕರಿಗೆ ಸನ್ಮಾನ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಬ್ಲಾಕ್ ಹಿಂದುಳಿದ ವರ್ಗಗಳ ಘಟಕದ ಸಂಯುಕ್ತ ಆಶ್ರಯದಲ್ಲಿ ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಕಾರ್ಯಕ್ರಮವು ನಡೆಯಿತು.

ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಜಾತಿ ಅಸಮಾನತೆಯ ವಿರುದ್ದ ಜನಜಾಗೃತಿ ನಡೆಸಿ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸಿದ ಬ್ರಹ್ಮಶ್ರೀ ನಾರಾಯಣಗುರುಗಳ ಜೀವನವು ನಮಗೆಲ್ಲರಿಗೂ ಅನುಕರಣೀಯವಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರವು ಹಿಂದುಳಿದ ವರ್ಗಗಳ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು ರಾಜ್ಯ ಸರ್ಕಾರದ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನಮ್ಮವರೇ ಆದ ಮಂಜುನಾಥ ಪೂಜಾರಿ ಮುದ್ರಾಡಿ ಅವರನ್ನು ನೇಮಕಗೊಳಿಸಿರುವುದು ಕಾಂಗ್ರೆಸ್ ಪಕ್ಷವು ಹಿಂದುಳಿದ ವರ್ಗಗಳ ಮೇಲಿನ ಕಾಳಜಿ ಹಾಗು ಬದ್ದತೆಗೆ ಸಾಕ್ಷಿಯಾಗಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಮಾತನಾಡಿ ನಾರಾಯಣ ಗುರುಗಳ ತತ್ವ ಸಿದ್ದಾಂತದಂತೆ ಕಂದಾಚಾರಗಳನ್ನು, ಮೂಡನಂಬಿಕೆಯನ್ನು ಹೊಗಲಾಡಿಸಲು ಹಿರಿಯ ಕಾಂಗ್ರೆಸ್ ನಾಯಕರಾದ ಜನಾರ್ಧನ ಪೂಜಾರಿಯವರು ನಡೆದುಕೊಂಡಿರುವುದು ಈ ಸಂದರ್ಭದಲ್ಲಿ ನಾವು ನೆನಪು ಮಾಡಿಕೊಳ್ಳಬೇಕು ಎಂದರು.

ಜಿಲ್ಲಾ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ಮಾತನಾಡಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರೂ ನಾರಾಯಣ ಗುರುಗಳನ್ನು ಭೇಟಿಯಾಗಿ ಪ್ರೇರಣೆಯನ್ನು ಪಡೆದಿರುವುದು ನಾರಾಯಣ ಗುರುಗಳ ತತ್ವಗಳ ಸಾರವನ್ನು ಸೂಚಿಸುತ್ತದೆ ಎಂದರು. ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಸುಧಾಕರ ಕೋಟ್ಯಾನ್, ಗ್ಯಾರಂಟಿ ಸಮಿತಿಯ ಅದ್ಯಕ್ಷ ಅಜಿತ್ ಹೆಗ್ಡೆ ಮಾಳ ಅವರು ಸಂದರ್ಭೋಚಿತವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳಿಂದ ವಿವಿಧ ಕ್ಷೇತ್ರಗಳ ಸಾಧಕರಾದ ಸುಂದರ ಮೊಯಿಲಿ ಕುಕ್ಕುಂದೂರು, ಜಯ ಪೂಜಾರಿ ಈದು, ಶಂಕರ ಕುಲಾಲ್ ಸಾಣೂರು, ಸಾಧು ಭಂಡಾರಿ ನಿಂಜೂರು, ನಾಗೇಶ್ ಆಚಾರ್ಯ ಎರ್ಲಪಾಡಿ, ಶ್ರೀಮತಿ ಶಾರದಾ ಮಡಿವಾಳ ಮಾಳ, ಶ್ರೀಮತಿ ಶೋಬಾ ದಿನೇಶ್ ಶೆಟ್ಟಿಗಾರ್, ರಮಾನಂದ ನಾಯಕ್ ಹಿರ್ಗಾನ, ಜಯ ಭಂಡಾರಿ ಬೈಲೂರು, ವಿಠಲ ಪೂಜಾರಿ ಮಿಯ್ಯಾರು ಅವರನ್ನು ಗುರುತಿಸಿ ಸನ್ಮಾನಿಸಲಾಯಿತು. ಸನ್ಮಾನಿತರಾದ ಶ್ರೀಮತಿ ಶಾರದಾ ಮಡಿವಾಲ ಮಾಳ ಅವರು ಜಾನಪದ ಪಾರ್ದನವನ್ನು ಹಾಡಿ ಎಲ್ಲರ ಗಮನ ಸೆಳೆದರು.

ಕಾರ್ಯಕ್ರಮದ ವೇದಿಕೆಯಲ್ಲಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಗೋಪಿನಾಥ್ ಭಟ್, ರಾಜ್ಯ ಕಿಸಾನ್ ಘಟಕದ ಕಾರ್ಯದರ್ಶಿ ಉದಯ ಶೆಟ್ಟಿ ಕುಕ್ಕುಂದೂರು, ಹಿಂದುಳಿದ ವರ್ಗಗಳ ರಾಜ್ಯ ಕಾರ್ಯದರ್ಶಿ ರವಿಶಂಕರ್ ಶೇರಿಗಾರ್, ಮಾಜಿ ಪುರಸಭಾ ಅದ್ಯಕ್ಷ ಸುಭಿತ್ ಎನ್.ಆರ್, ಪ್ರಚಾರ ಸಮಿತಿಯ ಅನಿಲ್ ಪೂಜಾರಿ ಮಾಳ, ನಗರ ಹಿಂದುಳಿದ ವರ್ಗಗಳ ಘಟಕದ ಹೇಮಂತ್ ಆಚಾರ್ಯ, ನಗರ ಕಾಂಗ್ರೆಸ್ ಅದ್ಯಕ್ಷ ರಾಜೇಂದ್ರ ದೇವಾಡಿಗ, ರಾಜ್ಯ ಬಿಲ್ಲವ ಮಹಾಮಂಡಲದ ಉಪಾದ್ಯಕ್ಷರಾದ ಪ್ರಭಾಕರ ಬಂಗೇರ, ಶ್ರೀಮತಿ ಮಾಲಿನಿ ರೈ, ಅನಿತಾ ಡಿಸೋಜ ಬೆಲ್ಮನ್ ಉಪಸ್ಥಿತರಿದ್ದರು.

ಬ್ಲಾಕ್ ಹಿಂದುಳಿದ ವರ್ಗಗಳ ಘಟಕದ ಅದ್ಯಕ್ಷ ಅನಿಲ್ ಪೂಜಾರಿ ನೆಲ್ಲಿಗುಡ್ಡೆ ಎಲ್ಲರನ್ನು ಸ್ವಾಗತಿಸಿದರು, ಬ್ಲಾಕ್ ಉಪಾದ್ಯಕ್ಷ ಜಾರ್ಜ್ ಕ್ಯಾಸ್ತಲಿನೊ ವಂದನಾರ್ಪಣೆಗೈದರು, ಬ್ಲಾಕ್ ವಕ್ತರಾ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page