
ಕರಾವಳಿ ಹಾಗೂ ಹೊಳೆನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಯಾಗುವ ಸಾಧ್ಯತೆಯಿದ್ದು ಕರಾವಳಿಯ ಹಲವೆಡೆ ನಾಳೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಾಳಿಯ ಜೊತೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ,ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಚಿಕ್ಕಬಳ್ಳಾಪುರ ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ.





















































































