
ಕಾರ್ಕಳ: ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರ ಸಾರಥಿ ಫ್ರೆಂಡ್ಸ್, ಅಜೆಕಾರು ಕಾರ್ಕಳ ಇವರ ವತಿಯಿಂದ ‘ಸಾರಥಿ’ ನೂತನ ಆಂಬುಲೆನ್ಸ್ ಲೋಕಾರ್ಪಣೆ ಸಮಾರಂಭ ಆಗಸ್ಟ್ 30ರಂದು ಅಜೆಕಾರು ಬಸ್‌ಸ್ಟ್ಯಾಂಡ್‌ನಲ್ಲಿ ನಡೆಯಲಿದೆ.
ಪೂರ್ವಾಹ್ನ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ. ತಾಲೂಕಿನ ಆಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷ, ವಕೀಲ ಬಿ. ಸದಾನಂದ ಸಾಲಿಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಸುಧಾಕರ ಶೆಟ್ಟಿ, ವಿಷ್ಣುಮೂರ್ತಿ ದೇವಸ್ಥಾನ ಅಜೆಕಾರು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭರತ್ ಶೆಟ್ಟಿ, ಡಾ| ಸಂತೋಷ್ ಕುಮಾರ್ ಶೆಟ್ಟಿ, ಈಶ್ವರ ಮಲ್ಪೆ ಅರುಣ್ ಭಟ್, ಡಾ| ಚಂದ್ರಿಕಾ ಕಿಣಿ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.





















































































