28.9 C
Udupi
Monday, August 31, 2026
spot_img
spot_img
HomeBlogಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಫಲಾನುಭವಿಗಳಿಗೆ ಡಿಕೆಶಿ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಫಲಾನುಭವಿಗಳಿಗೆ ಡಿಕೆಶಿ ಮಹತ್ವದ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಸಮಿತಿ ಸದಸ್ಯರು ಮನೆ-ಮನೆಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಪರಿಶೀಲಿಸಲಿದ್ದಾರೆ.

₹ 2,000 ಕೈತಪ್ಪದಂತೆ ದಾಖಲೆ ನೀಡಿ..

ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ₹ 2,000 ಪಡೆಯುತ್ತಿರುವ ಮಹಿಳೆಯರು ಸಮೀಕ್ಷೆ ವೇಳೆ ಕೇಳಲಾಗುವ ದಾಖಲೆಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಫಲಾನುಭವಿಗಳಿಗೆ ಡಿಕೆಶಿ ವಿಡಿಯೋ ಸಂದೇಶ

ಯೋಜನೆಗೆ ಮೂರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಡಿಯೋ ಸಂದೇಶ ನೀಡಿರುವ ಡಿಕೆ ಶಿವಕುಮಾರ್, ಸುಮಾರು 1.22 ಕೋಟಿ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹ 2,000 ಜಮೆಯಾಗುತ್ತಿದೆ ಎಂದು ತಿಳಿಸಿದ್ದಾರೆ. ಯೋಜನೆಯ ಪರಿಷ್ಕರಣೆಗೆ ಫಲಾನುಭವಿಗಳ ಮನೆಗೆ ಸಮಿತಿ ಸದಸ್ಯರು ಭೇಟಿ ನೀಡಲಿದ್ದಾರೆ ಎಂದಿದ್ದಾರೆ.

ಹೊಸ ಅರ್ಜಿಯನ್ನು ಫಲಾನುಭವಿಗಳಿಗೆ ನೀಡಲಾಗುತ್ತಿದ್ದು, ಅದನ್ನು ಸರಿಯಾದ ಮಾಹಿತಿಯೊಂದಿಗೆ ಭರ್ತಿ ಮಾಡಬೇಕು. ಹೊಸ ಭಾವಚಿತ್ರ, ಮೊಬೈಲ್ ಸಂಖ್ಯೆ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಡಿಕೆಶಿ ಸೂಚಿಸಿದ್ದಾರೆ.

ಅರ್ಜಿಯಲ್ಲಿ ಏನೆಲ್ಲಾ ಮಾಹಿತಿ?

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೊಸ ಅರ್ಜಿ ನಮೂನೆ ಸಿದ್ಧಪಡಿಸಿದ್ದು, ಅದನ್ನು ಸರ್ಕಾರ ಹಾಗೂ ಹಣಕಾಸು ಇಲಾಖೆಯ ಪರಿಶೀಲನೆಗೆ ಕಳುಹಿಸಿದೆ. ಅರ್ಜಿಯಲ್ಲಿ ಫಲಾನುಭವಿಯ ಆಧಾರ್, ಬ್ಯಾಂಕ್ ಖಾತೆ, ಕುಟುಂಬದ ವಿವರ, ಜಾತಿ ಹಾಗೂ ಪತಿಯ ಮಾಹಿತಿಯನ್ನು ಕೇಳುವ ಸಾಧ್ಯತೆಯಿದೆ.

ಇದರೊಂದಿಗೆ ಆಧಾರ್ ದಾಖಲೆ, ಐಟಿ ಮತ್ತು ಜಿಎಸ್‌ಟಿ ಪಾವತಿ ವಿವರ ಹಾಗೂ APL ಅಥವಾ BPL ಪಡಿತರ ಚೀಟಿ ಹೊಂದಿರುವ ಬಗ್ಗೆ ಮಾಹಿತಿಯನ್ನೂ ಪಡೆಯಲಾಗುತ್ತದೆ. ಹೀಗಾಗಿ ಫಲಾನುಭವಿಗಳು ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಸೂಚಿಸಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page