
ಬೆಂಗಳೂರು: ‘ಗೃಹ ಜ್ಯೋತಿ’ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ‘ಗೃಹ ಜ್ಯೋತಿ’ ಅಡಿ ಪ್ರತಿ ಮನೆಗೆ ಗರಿಷ್ಠ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ.
2023ರ ಜುಲೈನಲ್ಲಿ ಆರಂಭವಾದ ಯೋಜನೆಯ ಫಲಾನುಭವಿಗಳ ಪರಿಶೀಲನಾ ಸಮೀಕ್ಷೆ ಜುಲೈ 1ರಿಂದ ನಡೆಯುತ್ತಿದೆ. ಆಗಸ್ಟ್ 31ಕ್ಕೆ ನಿಗದಿಯಾಗಿದ್ದ ಗಡುವನ್ನು ಇದೀಗ ಒಂದು ತಿಂಗಳು ವಿಸ್ತರಿಸಿ ಸೆಪ್ಟೆಂಬರ್ 30ರವರೆಗೆ ಅವಕಾಶ ನೀಡಲಾಗಿದೆ.






















































































