
ಬೆಂಗಳೂರು: ಇಲ್ಲಿನ ಸಿಂಗೇನ ಅಗ್ರಹಾರ ಬಳಿಯ ಜಿಆರ್ ಫಾರ್ಮ್‍ಹೌಸ್‍ನಲ್ಲಿ ನಡೀತಿದ್ದ ರೇವ್‍ಪಾರ್ಟಿ ಇದೀಗ ತೆಲುಗು ನಟಿ ಹೇಮಾಗೆ ಸಂಕಷ್ಟ ತಂದೊಡ್ಡಿದೆ.ತೆಲುಗು ನಟಿ ಹೇಮಾ ಪಾರ್ಟಿಯಲ್ಲಿ ಇದ್ದದ್ದು ಈಗ ಜಗಜ್ಜಾಹೀರವಾಗಿದೆ.
ಈ ಕುರಿತು ಖುದ್ದು ಪೊಲೀಸ್ ಆಯುಕ್ತ ದಯಾನಂದ್, ತೆಲುಗಿನ ಖ್ಯಾತ ನಟಿ ಪಾರ್ಟಿಯಲ್ಲಿ ಇದ್ದಿದ್ದನ್ನು ಬಹಿರಂಗಗೊಳಿಸಿದ್ದಾರೆ. ಇನ್ನೂ ಪಾರ್ಟಿಯಲ್ಲಿ ಇದ್ದರೂ ಕೂಡ, ನಾನು ಹೈದ್ರಾಬಾದ್‍ನಲ್ಲಿದ್ದೇನೆ ಅಂತ ನಾಟಕವಾಡಿದ್ದ ನಟಿ ಹೇಮಾಗೆ ಈಗ ಸಂಕಷ್ಟ ಎದುಗುವ ಸಾಧ್ಯತೆ ಇದೆ.