
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು ಮಳೆಯಾಗಲಿದೆ.
ಕಲಬುರಗಿ, ಧಾರವಾಡ, ಬೆಳಗಾವಿ, ಹಾವೇರಿ ರಾಯಚೂರು ಸೇರಿದಂತೆ ಹಲವು ಭಾಗಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಜೆಯ ವೇಳೆಗೆ ಸಣ್ಣಗೆ ಮಳೆಯಾಗಲಿದೆ.






















































































