
ಸರ್ಕಾರಿ ಪದವಿ ಪೂರ್ವ ಕಾಲೇಜು, ಸಾಣೂರು ಕಾರ್ಕಳದ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಿದ್ಯಾರ್ಥಿಗಳು ಸೆಪ್ಟೆಂಬರ್ 2 ರಂದು ಜೋಡುರಸ್ತೆಯ ಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಂದೂರು ಇಲ್ಲಿ ನಡೆದ
ಕಾರ್ಕಳ ವಲಯದ ಸ್ಕೌಟ್ಸ್ ಗೈಡ್ಸ್ ಮಕ್ಕಳ ಗೀತಾ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಜನಪದ ಗೀತಗಾಯನ ಸ್ಪರ್ಧೆಯಲ್ಲಿ ರೋವರ್ಸ್ ಹಾಗೂ ರೇಂಜರ್ಸ್ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.























































































