ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಎಚ್.ಎಸ್ ಆದೇಶ

ಕಾರ್ಕಳ ಸೆ.04: ಕಾಂಗ್ರೆಸ್ ಪಕ್ಷದ ಸಂಘಟನೆ, ಸಭೆಗಳು ಹಾಗೂ ಕಾರ್ಯ ಚಟುವಟಿಕೆಗಳಲ್ಲಿ ಸಕ್ರೀಯರಾಗದೇ ವಿಫಲವಾದ ಹಿನ್ನಲೆಯಲ್ಲಿ, ಉಡುಪಿ ಜಿಲ್ಲೆಯ ನಾಲ್ಕು ವಿಧಾನ ಸಭಾ ಕ್ಷೇತ್ರಗಳ ಯುವ ಕಾಂಗ್ರೆಸ್ ಅಧ್ಯಕ್ಷರನ್ನು ಅಮಾನತುಗೊಳಿಸಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಎಚ್.ಎಸ್ ಆದೇಶಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿಯವರ ಆಪ್ತ ಕಾರ್ಕಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಸೂರಜ್ ಶೆಟ್ಟಿ, ಉಡುಪಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಸುದೇಶ್ ಶೆಟ್ಟಿ, ಬ್ರಹ್ಮಾವರ ಬ್ಲಾಕ್ ಅಧ್ಯಕ್ಷ ಜಾನ್ಸನ್ ಹಾಗೂ ಬೈಂದೂರು ಬ್ಲಾಕ್ ಅಧ್ಯಕ್ಷ ಭರತ್ ದೇವಾಡಿಗ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.




































