
ಬೆಂಗಳೂರು: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಸ್‌ಐಟಿ ಈಗಾಗಲೇ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ತಕ್ಷಣ ಪಾಸ್‌ಪೋರ್ಟ್ ರದ್ದು ಮಾಡುವ ಅಧಿಕಾರ ಕೇಂದ್ರಕ್ಕಿದ್ದು ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸ್ಪಂದನೆ ನೀಡಬೇಕು ಎಂದು ಹೇಳಿದ್ದಾರೆ.
ಇನ್ನು ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಹಗಲು ಕನಸು ಎಂದಿರುವ ಬಿಜೆಪಿಗೆ ತಿರುಗೇಟು ನೀಡಿದ ಪರಮೇಶ್ವರ್, ಬಿಜೆಪಿಯವರು ರಾತ್ರಿ ಕನಸು ಕಾಣುತ್ತಿದ್ದಾರಾ? ಯಾರು ಯಾವಾಗ ಕಂಡರೂ ಕನಸು ಕನಸೇ. ಎಷ್ಟು ಸ್ಥಾನ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಹೇಳಿದ್ದಾರೆ ಎಂದು ತಿರುಗೇಟು ನೀಡಿದರು.