ಕಬಡ್ಡಿ ಮ್ಯಾಟ್ ಎಸ್.ವಿ.ಟಿಗೆ ಕಾರ್ಕಳ ಕಮಲಾಕ್ಷ ಕಾಮತರ ಕೊಡುಗೆ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಎಸ್.ವಿ.ಟಿ ಪದವಿಪೂರ್ವ ಕಾಲೇಜು ಕಾರ್ಕಳ ಇವರ ಸಹಯೋಗದಲ್ಲಿ ಪದವಿಪೂರ್ವ ವಿಭಾಗದ ಬಾಲಕರ ಹಾಗೂ ಬಾಲಕಿಯರ ಕಬಡ್ಡಿ ಪಂದ್ಯಾಟ ಎಸ್.ವಿ.ಟಿ ವಿದ್ಯಾ ಸಂಸ್ಥೆಗಳ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.
ಎಸ್.ವಿ ಎಜ್ಯುಕೇಶನ್ ಟ್ರಸ್ಟ್ (ರಿ.) ಕಾರ್ಕಳ ಇದರ ಉಪಾಧ್ಯಕ್ಷರು ಹಾಗೂ ಖ್ಯಾತ ಲೆಕ್ಕ ಪರಿಶೋಧಕರು ಆಗಿರುವ ಕೆ. ಕಮಲಾಕ್ಷ ಕಾಮತ್ ಇವರು ಕೊಡುಗೆಯಾಗಿ ನೀಡಿದ ನೂತನ ಕಬಡ್ಡಿ ಮ್ಯಾಟ್ ಹಾಗೂ ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ ಬಾಲಕಿಯರ ಕಬಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ಕ್ರೀಡಾ ಸ್ಪೂರ್ತಿಯಿಂದ ಆಡಿದಾಗ ಗೆಲುವು ಖಂಡಿತ ಎಂಬುದನ್ನು ತಿಳಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಎಸ್.ವಿ.ಟಿ ಎಜ್ಯುಕೇಶನ್ ಟ್ರಸ್ಟ್ (ರಿ.) ಕಾರ್ಕಳದ ಕಾರ್ಯದರ್ಶಿ ಕೆ.ಪಿ ಶೆಣೈ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕಾರ್ಕಳದ ಖ್ಯಾತ ಉದ್ಯಮಿ ವಿಜಯ ಶೆಟ್ಟಿ, ಹಿರಿಯ ಸಹ ಶಿಕ್ಷಕರಾದ ಯೋಗೇಂದ್ರ ನಾಯಕ್, ಕಾರ್ಕಳ ತಾಲೂಕು ಕ್ರೀಡಾ ಸಂಯೋಜಕ ಶರತ್ ರಾವ್ ಮತ್ತಿತರರು ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಚಾರ್ಯರಾದ ನೇಮಿರಾಜ್ ಶೆಟ್ಟಿ ಕೆ ಸ್ವಾಗತಿಸಿದರು. ಉಪನ್ಯಾಸಕಿ ಶ್ರೀಮತಿ ಸುಮಂಗಲಾ ಪ್ರಭು ವಂದಿಸಿದರು. ಉಪನ್ಯಾಸಕ ಪ್ರಭಾತ್ ರಂಜನ್ ನಿರೂಪಿಸಿದರು.





































