29.8 C
Udupi
Wednesday, September 9, 2026
spot_img
spot_img
HomeBlogತಾಲೂಕು ಮಟ್ಟದ ಬಾಲಕ- ಬಾಲಕಿಯರ ಕಬಡ್ಡಿ ಪಂದ್ಯಾಟ

ತಾಲೂಕು ಮಟ್ಟದ ಬಾಲಕ- ಬಾಲಕಿಯರ ಕಬಡ್ಡಿ ಪಂದ್ಯಾಟ

ಎಸ್ ವಿ ಟಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ, ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ ಎಸ್. ವಿ. ಟಿ ಪದವಿಪೂರ್ವ ಕಾಲೇಜು ಕಾರ್ಕಳ ಇವರ ಸಹಯೋಗದೊಂದಿಗೆ ನಡೆದ ಪದವಿಪೂರ್ವ ವಿಭಾಗದ ತಾಲೂಕು ಮಟ್ಟದ ಬಾಲಕ ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ ಎಸ್.ವಿ.ಟಿ ಪದವಿ ಪೂರ್ವ ಕಾಲೇಜಿನ ಬಾಲಕಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ಮಣ್ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಬಾಲಕರ ವಿಭಾಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಬಜಗೋಳಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸರಕಾರಿ ಪದವಿ ಪೂರ್ವ ಕಾಲೇಜು ಕಾರ್ಕಳ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ವಿಜೇತರನ್ನು ಅಭಿನಂದಿಸಲಾಯಿತು.


ಕಾರ್ಯಕ್ರಮದಲ್ಲಿ ಎಸ್.ವಿ ಎಜ್ಯಕೇಷನ್ ಟ್ರಸ್ಟಿನ ಕಾರ್ಯದರ್ಶಿ ಕೆ‌.ಪಿ ಶೆಣೈ, ಚಂದ್ರಕಾಂತ್ ಶೆಟ್ಟಿ ಉದ್ಯಮಿಗಳು ಮುಂಬೈ, ಮಯೂರ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಕೆ. ಮೋಹನ್ ಮಡಿವಾಳ, ಕಾಲೇಜಿನ ಪೂರ್ವ ವಿದ್ಯಾರ್ಥಿನಿ ಶ್ರೀಮತಿ ದೀಕ್ಷಾ ಶೆಟ್ಟಿ, ಕಾರ್ಕಳ ತಾಲೂಕಿನ ಕ್ರೀಡಾ ಸಂಯೋಜಕ ಶರತ್ ರಾವ್, ಪ್ರಭಾತ್ ರಂಜನ್ ಉಪಸ್ಥಿತರಿದ್ದರು.
ಎಸ್.ವಿ ಎಜ್ಯಕೇಶನ್ ಟ್ರಸ್ಟಿನ ಕೋಶಾಧಿಕಾರಿ ಐ.ರವೀಂದ್ರನಾಥ್ ಅಧ್ಯಕ್ಷತೆಯನ್ನು ವಹಿಸಿದ್ದರು.ಕಾಲೇಜಿನ ಪ್ರಾಚಾರ್ಯರಾದ ನೇಮರಾಜ ಶೆಟ್ಟಿ ಕೆ ಸ್ವಾಗತಿಸಿದರು. ಇತಿಹಾಸ ಉಪನ್ಯಾಸಕ ಪ್ರಕಾಶ್ ನಾಯ್ಕ್ ನಿರೂಪಿಸಿ, ವಂದಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page