ನಿಟ್ಟೆ ಡಾ. ಎನ್.ಎಸ್.ಎ.ಎಂ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ, ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ನಿಟ್ಟೆಯ ಡಾ. ಎನ್.ಎಸ್.ಎ.ಎಂ. ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿದೆ.
ಚಿತ್ರದಲ್ಲಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ರಾಧಾ ಪ್ರಭು, ನಿಟ್ಟೆ ಪದವಿ ಪೂರ್ವ ಕಾಲೇಜಿನ ಆಡಳಿತಾಧಿಕಾರಿ ಪ್ರಕಾಶ್ ಶೆಣೈ, ಸಂಸ್ಥೆಯ ಪ್ರಾಂಶುಪಾಲರಾದ ಅಜಿಲಾ ಹಾಗೂ ಸಂಸ್ಥೆಯ ಕಬಡ್ಡಿ ತರಬೇತುದಾರರು ಮತ್ತು ದೈಹಿಕ ಶಿಕ್ಷಣ ಶಿಕ್ಷಕಿ ಉಷಾ ಶೆಟ್ಟಿ ಉಪಸ್ಥಿತರಿದ್ದಾರೆ.




































