
ಸೆ. 10,2026 ರಂದು ಡಾ|ವಿ. ಎಸ್. ಆಚಾರ್ಯ ಸೌಟ್ಸ್ & ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರ, ಉಡುಪಿ ಇಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಗೀತ ಗಾಯನ ಜನಪದ ಗೀತೆ ಸ್ಪರ್ಧೆಯಲ್ಲಿ, ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜು ರೇಂಜರ್ಸ್ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ
ರೋವರ್ಸ್ ವಿಭಾಗದ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ರೇಂಜಸ್ ವಿಭಾಗದ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಲಿಖಿತಾ, ಮನ್ವಿತಾ ಹಂಸಿಕ ಸುಶ್ಮಿತಾ ಶಿವಾನಿ ದೀಕ್ಷಾ ಭಾಗವಹಿಸಿರುತ್ತಾರೆ.
ವಿಜೇತ ತಂಡಕ್ಕೆ
ಸಂಸ್ಥೆ ಪ್ರಾಂಶುಪಾಲರಾದ ಶ್ರೀಮತಿ ಸುಚೇತ ಕಾಮತ್ ಹಾಗೂ ಉಪನ್ಯಾಸಕ ವೃಂದ ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ಸಾಧನೆಗಳಿಗೆ ಶುಭ ಹಾರೈಸಿರುತ್ತಾರೆ




































