
ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಬಂದೂಕು ಹೊಂದಿರುವವರು ನವೆಂಬರ್ 1ರೊಳಗೆ ಪೊಲೀಸ್ ಅಥವಾ ಸ್ಥಳೀಯ ಅಧಿಕಾರಿಗಳಿಗೆ ಶಸ್ತ್ರಾಸ್ತ್ರಗಳನ್ನು ಒಪ್ಪಿಸಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಕ್ರಮ ಬಂದೂಕುಗಳ ಬಳಕೆ ಇನ್ನೂ ಕಡಿಮೆಯಾಗಿಲ್ಲ. ಕೊಳ್ಳೇಗಾಲ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬಂದೂಕುಗಳಿರುವ ಮಾಹಿತಿ ಇದೆ ಎಂದು ಹೇಳಿದರು.
ಅಕ್ರಮ ಬಂದೂಕುಗಳನ್ನು ಹೊಂದಿರುವವರು ಅವುಗಳನ್ನು ಘೋಷಿಸಿ ಪರವಾನಗಿ ಪಡೆಯುವಂತೆ ಸೂಚಿಸಿದರೂ, ಕೆಲವರು ಇನ್ನೂ ಕ್ರಮ ಕೈಗೊಂಡಿಲ್ಲ. ಕಳ್ಳಬೇಟೆಗೂ ಕಡಿವಾಣ ಹಾಕಬೇಕಿದೆ ಎಂದು ಸಿಎಂ ತಿಳಿಸಿದರು.
ನವೆಂಬರ್ 1ರೊಳಗೆ ಬಂದೂಕುಗಳನ್ನು ಸರೆಂಡರ್ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸುವುದಿಲ್ಲ. ಆದರೆ ಗಡುವಿನೊಳಗೆ ಶಸ್ತ್ರಾಸ್ತ್ರ ಒಪ್ಪಿಸದಿದ್ದರೆ ಮನೆಗಳ ತಪಾಸಣೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.




































