
ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರವಳ ನಾಡಿನ ಬೀದರ್ ಕಲಬುರಗಿ ರಾಯಚೂರು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ದಕ್ಷಿಣ ಒಳನಾಡಿನ ಮೈಸೂರು ಚಾಮರಾಜನಗರ ರಾಮನಗರ ಬೆಂಗಳೂರು ಚಿಕ್ಕಬಳ್ಳಾಪುರ ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಯಾಗಲಿದೆ.
ಕರಾವಳಿ ಜಿಲ್ಲೆಯಲ್ಲಿ ಮುಂದಿನ 10 ದಿನಗಳವರೆಗೆ ಮಳೆ ಕಡಿಮೆಯಾಗಲಿದ್ದು ಬಿಸಿಲಿನ ಪ್ರಮಾಣ ಹೆಚ್ಚಾಗಿರಲಿದೆ. ಸೆಪ್ಟೆಂಬರ್ 18 ಮತ್ತು 19ರ ಸುಮಾರಿಗೆ ಕರಾವಳಿಯ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




































