ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಜೇಸಿ ಇಂಟರ್ ನ್ಯಾಷನಲ್ ಅಂಗ್ಲ ಮಾಧ್ಯಮ ಶಾಲೆ ಕಾರ್ಕಳ ಇಲ್ಲಿನ ಬನ್ನೀಸ್ ತಂಡದ ವಿದ್ಯಾರ್ಥಿಗಳು ಪ್ರಥಮ.
ತಂಡದಲ್ಲಿ ಎಲ್. ಕೆ. ಜಿ, ಯು.ಕೆ. ಜಿ ಮಕ್ಕಳಾದ ದೃತಿ, ಸುದೀಶ್, ಶಿವಾನ್ಸ್, ಸುಮೇಯ, ಸ್ವಸ್ತಿ, ಅದ್ರಿತಿ, ಲಯನ, ಜೇಷ್ಠ ಇವರು ಭಾಗವಹಿಸಿರುತ್ತಾರೆ.
ಇವರನ್ನು ಶಾಲಾ ಅಧ್ಯಕ್ಷರು, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.




































