ಪ್ರಧಾನಿ,ನಿತಿನ್ ಗಡ್ಕರಿ, ವಿಶೇಷ ಮುತುವರ್ಜಿ ವಹಿಸಿದ ಕೋಟ ಶ್ರೀನಿವಾಸ್ ಪೂಜಾರಿ ರವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ವಿ. ಸುನಿಲ್ ಕುಮಾರ್

ಕರಾವಳಿ ಮತ್ತು ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕದ ಸಂಪರ್ಕ ಸೇತು ಆಗಿರುವ ಆಗುಂಬೆ ಘಾಟಿಯ ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ತಡೆಗೋಡೆ ಸಹಿತ ಆಗುಂಬೆಯಿಂದ ಹೆಬ್ರಿ ಪೇಟೆಯಿಂದ ದೇವಸ್ಥಾನದ ತನಕ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ರಾಷ್ಟ್ರೀಯ ಹೆದ್ದಾರಿ ವತಿಯಿಂದ 18 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿರುತ್ತದೆ ಎಂದು ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ತಿಳಿಸಿರುತ್ತಾರೆ.
ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿ ಸೇರಿದಂತೆ ಕೆಲವೊಂದು ತಿರುವುಗಳಲ್ಲಿ ವಾಹನಗಳ ಸುಗಮ ಸಂಚಾರದ ಹಿತ ದೃಷ್ಟಿಯಿಂದ ಸದರಿ ರಸ್ತೆ ಅಭಿವೃದ್ಧಿಗೆ ಈ ಹಿಂದೆ ಮಾನ್ಯ ಸಂಸದರ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಅದರಂತೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಹೆದ್ದಾರಿ ವತಿಯಿಂದ ರೂಪಾಯಿ 18 ಕೋಟಿ ಅನುದಾನ ಬಿಡುಗಡೆ ಮಾಡಿದ್ದು ಇದಕ್ಕಾಗಿ ನಮ್ಮ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಮತ್ತು ಸಾರಿಗೆ ಸಚಿವರಾದ ಶ್ರೀ ನಿತಿನ್ ಗಡ್ಕರಿ ಹಾಗೂ ಅನುದಾನ ಬಿಡುಗಡೆಗೆ ವಿಶೇಷ ಮುತುವರ್ಜಿ ವಹಿಸಿದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಧನ್ಯವಾದಗಳು.
ಇಲಾಖಾ ಪ್ರಕ್ರಿಯೆಗಳನ್ನು ಆದಷ್ಟು ಶೀಘ್ರ ಮುಗಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕರ ಜನಸೇವಾ ಕಛೇರಿ ವಿಕಾಸ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.




































