
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ, ಕಾರ್ಕಳ ಇಲ್ಲಿನ ಶಿಕ್ಷಕಿಯಾಗಿರುವ ಫ್ಲಾಕ್ ಲೀಡರ್ ಶ್ರೀಮತಿ ವಂದನಾ ರೈ ಯವರು ಪ್ರಥಮ ಸ್ಥಾನವನ್ನು ಗಳಿಸಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರನ್ನು ಶಾಲಾ ಅಧ್ಯಕ್ಷರು, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.




































