27.3 C
Udupi
Sunday, September 13, 2026
spot_img
spot_img
HomeBlogಕಾರ್ಕಳ : ಅಜೆಕಾರು ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ

ಕಾರ್ಕಳ : ಅಜೆಕಾರು ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ

ಸರಕಾರದ ಸುತ್ತೋಲೆಗಳು ಜನಸಾಮಾನ್ಯರ ಹಿತ ಕಾಯುವಂತಿರಬೇಕು: ಶಾಸಕ ಸುನಿಲ್ ಕುಮಾರ್

ಅಜೆಕಾರು: ಸರ್ಕಾರದ ಸುತ್ತೋಲೆಗಳು ಜನರ ಸಮಸ್ಯೆ ಪರಿಹರಿಸುವಂತೆಯೇ ಇರಬೇಕೇ ಹೊರತು ಸವಲತ್ತುಗಳನ್ನು ಕಿತ್ತುಕೊಂಡು ಸಮಸ್ಯೆಯನ್ನು ಮತ್ತಷ್ಟು ಉಲ್ಬಣಗೊಳಿಸುವಂತೆ ಇರಬಾರದು. ಜನರು ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದೊಂದಿಗೆ ಸರ್ಕಾರ ಪ್ರಜಾಸೇವಾ ಆಂದೋಲನ ಪ್ರಾರಂಭಿಸಿದೆ ಎಂದು ಮಾಜಿ ಸಚಿವ ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.

ಅವರು ಶನಿವಾರ ಅಜೆಕಾರಿನ ಜ್ಯೋತಿ ಪ್ರೌಢಶಾಲೆ ಸಭಾಭವನದಲ್ಲಿ ತಾಲೂಕು ಆಡಳಿತ ಹಾಗೂ ಕಾರ್ಕಳ ಪ್ರಜಾಸೇವಾ ಇಲಾಖೆಯ ವತಿಯಿಂದ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನವನ್ನು ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೆಲವು ಸಂದರ್ಭಗಳಲ್ಲಿ ಅಧಿಕಾರಿಗಳೇ ಏಕಾಏಕಿ ನಿರ್ಣಯ ತೆಗೆದುಕೊಳ್ಳುವುದರಿಂದ ಜನಸಾಮಾನ್ಯರು ಸಂಕಷ್ಟಪಡಬೇಕಾಗುತ್ತದೆ. ಅಕ್ರಮ-ಸಕ್ರಮದ 7,773 ಅರ್ಜಿಗಳನ್ನು ಸಮಿತಿಯ ಗಮನಕ್ಕೆ ತರದೆ ವಿಲೇವಾರಿ ಮಾಡಿ ತಿರಸ್ಕರಿಸಲಾಗಿದೆ. ಸುಮಾರು 8,554 ಫಲಾನುಭವಿಗಳ ವಿವಿಧ ಪಿಂಚಣಿ ಯೋಜನೆ ಸ್ಥಗಿತಗೊಂಡಿದೆ. 1,500ಕ್ಕೂ ಅಧಿಕ ಪಡಿತರ ಚೀಟಿಗಳು ರದ್ದುಗೊಂಡಿವೆ. ಇದರಿಂದಾಗಿ ಜನಸಾಮಾನ್ಯರು ಸಂಕಷ್ಟ ಪಡುವಂತಾಗಿದೆ. ಈ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. 9/11 ಹಾಗೂ ಪ್ರಾಧಿಕಾರಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೂ ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದರು.

ಕುಂದಾಪುರ ಸಹಾಯಕ ಆಯುಕ್ತೆ ರಶ್ಮಿ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಸ್ಥಳೀಯವಾಗಿಯೇ ಪರಿಹರಿಸುವ ಸಲುವಾಗಿ ಪ್ರಜಾಸೇವೆ ಆಂದೋಲನ ನಡೆಸಲಾಗುತ್ತಿದೆ ಎಂದರು.

ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್ ಪಿ ರಾವ್ ಕಾರ್ಕಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗಡೆ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಇಷಿತ ಗುಪ್ತ ಮಾತನಾಡಿದರು.

ನಾರಾಯಣಗುರು ಅಭಿವೃದ್ಧಿ ನಿಗಮದ ರಾಜ್ಯ ಅಧ್ಯಕ್ಷ ಮಂಜುನಾಥ ಕುಂದಾಪುರ ಪೂಜಾರಿ ಮಾತನಾಡಿ, ಅಧಿಕಾರಿಗಳು ಹಾಗೂ ಸಾರ್ವಜನಿಕರು ಒಟ್ಟಾಗಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪಬೇಕು. ಕಸ್ತೂರಿ ರಂಗನ್ ವರದಿ, 9/11 ಸಮಸ್ಯೆ, ಸರ್ವರ್ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅಧಿಕಾರಿಗಳು ಸ್ಪಂದಿಸಬೇಕು ಎಂದರು.

ಸುತ್ತೋಲೆಗಳು ಸರಳವಾಗಬೇಕಿದೆ ಎಂದು ಸುನಿಲ್ ಹೇಳಿದರು.

ಕುಮ್ಮಿ ಹಾಗೂ ಇತರ ಸರ್ಕಾರಿ ಜಾಗಗಳಲ್ಲಿ ವಾಸಿಸುತ್ತಿರುವವರ ತೆರಿಗೆ ಸ್ವೀಕರಿಸದಂತೆ ಸುತ್ತೋಲೆ ಬಂದಿದ್ದು, ಇದರಿಂದ ಭವಿಷ್ಯದಲ್ಲಿ ಇನ್ನಷ್ಟು ಸಮಸ್ಯೆ ಎದುರಾಗಲಿದೆ. ಇಂತಹ ಸಮಸ್ಯೆಗಳನ್ನು ಪರಿಹರಿಸುವುದು ಕಷ್ಟವಾಗಿದ್ದು ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು.

ಸಹಾಯಕ ಆಯುಕ್ತೆ ರಶ್ಮಿ ಎಸ್. ಆರ್. ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ, ಸ್ಥಳೀಯವಾಗಿಯೇ ಪರಿಹರಿಸುವ ಸಲುವಾಗಿ ಪ್ರಜಾಸೇವಾ ಆಂದೋಲನ ನಡೆಸಲಾಗುತ್ತಿದೆ ಎಂದರು.

ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಪ್ರಸಾಂತ್ ಪಿ. ರಾವ್, ಕಾರ್ಕಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಇಶಿತಾ ಗುಪ್ತ ಮಾತನಾಡಿದರು.

ತಹಶೀಲ್ದಾರ್ ಪ್ರದೀಪ್ ಆರ್. ಸ್ವಾಗತಿಸಿದರು. ಶಿಕ್ಷಕಿ ವಿಜೇತಾ ರಾಣಿ ನಿರೂಪಿಸಿದರು. ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಯಿತು. ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 105 ಅರ್ಜಿಗಳು ಸಲ್ಲಿಕೆಯಾದವು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page