
ಸೆ. 14ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ, ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಕೋಲಾರ ,ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಲಿದ್ದು, ಒಣ ಹವೆ ಮುಂದುವರೆಯಲಿದೆ.
ರಾಜ್ಯದಲ್ಲಿ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.

























































































































