
ಬೆಂಗಳೂರು: ಟಿ.ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ್ ಅವರನ್ನು ಅಮಾನತು ಮಾಡಬೇಕೆಂಬ ವಿಪಕ್ಷ ಬಿಜೆಪಿಯ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ಆಗ್ರಹದ ಮೇರೆಗೆ ಇನ್ಸ್‌ಪೆಕ್ಟರ್‌ರನ್ನು ಅಮಾನತು ಮಾಡಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಸೀದಿ ಮುಂದೆ ಮೆರವಣಿಗೆ ನಡೆಸಿ ಪಟಾಕಿ ಸಿಡಿಸಿದರೆ ‘ಗ್ರಹಚಾರ ಬಿಡಿಸ್ತೀನಿ’ ಎಂದು ಇನ್ಸ್‌ಪೆಕ್ಟರ್ ಧನಂಜಯ್ ಎಚ್ಚರಿಕೆ ನೀಡಿದ್ದರು. ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಧನಂಜಯ್ ಅಮಾನತಿಗೆ ಬಿಜೆಪಿ ಆಗ್ರಹಿಸಿತ್ತು.
ಈ ಕುರಿತು ಮಾತನಾಡಿದ ಪ್ರಿಯಾಂಕ್ ಖರ್ಗೆ, ಈ ಹಿಂದೆ ಅಶೋಕ್ ಗೃಹ ಸಚಿವರಾಗಿದ್ದಾಗಲೂ ಇಂತಹ ಸಭೆಗಳನ್ನು ನಡೆಸಿ ಸೂಚನೆ ನೀಡಲಾಗಿತ್ತು. ಅಂದು ಇದ್ದ ನಿಯಮಗಳೇ ಈಗಲೂ ಮುಂದುವರಿದಿವೆ ಎಂದು ಹೇಳಿದರು.





























































































































