
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ,ಮೈಸೂರು, ಮಂಡ್ಯ, ರಾಮನಗರ, ಕೋಲಾರ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೀದರ್, ಕಲಬುರಗಿ ,ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.






























































































































