
ಸೆ. 18 ಮತ್ತು 19ರಂದು ಕರಾವಳಿ,ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಬಾಗಲಕೋಟೆ,ಬೆಳಗಾವಿ, ಬೀದರ್, ಧಾರವಾಡ ,ಗದಗ, ಹಾವೇರಿ, ಕಲಬುರಗಿ ಕೊಪ್ಪಳ ,ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ ,ದಾವಣಗೆರೆ, ಹಾಸನ ,ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.






























































































































