
ರಾಜ್ಯದಲ್ಲಿ ಮಳೆ ಮುಂದುವರಿಯಲಿದ್ದು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಬೆಳಗಾವಿ, ಬಾಗಲಕೋಟೆ ,ಬೀದರ್, ಧಾರವಾಡ, ಗದಗ ,ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ,ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.






























































































































