
ಚಿಕ್ಕಮಗಳೂರು: ಸೆ. 19ರಂದು ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಬೆಂಗಳೂರಿನ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶೃಂಗೇರಿ ಪಟ್ಟಣದ ಗಾಂಧಿ ಮೈದಾನದ ಬಳಿ ನಡೆದಿದೆ.
ಮೃತರನ್ನು ದರ್ಶನ್ (22) ಎಂದು ಗುರುತಿಸಲಾಗಿದ್ದು ನಾಲ್ವರು ಸ್ನಾನಕ್ಕೆಂದು ನದಿಗೆ ಇಳಿದಿದ್ದ ವೇಳೆ, ನದಿಯ ಆಳದ ಅರಿವಿಲ್ಲದೆ ದರ್ಶನ್ ನೀರಿನಲ್ಲಿ ಸಿಲುಕಿ ಮುಳುಗಿದ್ದಾರೆ. ಉಳಿದ ಮೂವರು ಸುರಕ್ಷಿತವಾಗಿ ದಡ ಸೇರಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಶೃಂಗೇರಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದರ್ಶನ್ಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






























































































































