ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

ರಾಗ ತರಂಗ (ರಿ), ಮಂಗಳೂರು ಇವರ ವತಿಯಿಂದ ನಡೆದ ಜಿಲ್ಲಾಮಟ್ಟದ ರಾಗ ತರಂಗ ಆನ್ಲೈನ್ ದೇಶಭಕ್ತಿಗೀತೆ ಸಮೂಹ ಗಾಯನ ಸ್ಪರ್ಧೆಯ ಜೂನಿಯರ್ ವಿಭಾಗದಲ್ಲಿ ಸುಮಾರು 31 ತಂಡಗಳು ಭಾಗವಹಿಸಿದ್ದು,ಅದರಲ್ಲಿ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿಯ ವಿದ್ಯಾರ್ಥಿಗಳ ತಂಡವು ಆಯ್ಕೆಯಾಗಿ,ದಿನಾಂಕ 20/09/2026 ರ ರಂದು ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ನಡೆದ ಫೈನಲ್ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ.
ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು,ಪೋಷಕ ವೃಂದದವರು ಮತ್ತು ಶಾಲಾ ವಿದ್ಯಾರ್ಥಿಗಳು ಶುಭ ಹಾರೈಸಿರುತ್ತಾರೆ.






























































































































