27.7 C
Udupi
Tuesday, September 22, 2026
spot_img
spot_img
HomeBlogತುಳು ಭಾಷೆಗೆ ಅಧಿಕೃತ ಸ್ಥಾನಮಾನ, ಕಾರ್ಕಳದಲ್ಲಿ ಬ್ಲಾಕ್ ಕಾಂಗ್ರೆಸ್ ಹಾಗೂ ತುಳು ಸಂಘಟನೆಗಳಿಂದ ಸಂಭ್ರಮಾಚರಣೆ

ತುಳು ಭಾಷೆಗೆ ಅಧಿಕೃತ ಸ್ಥಾನಮಾನ, ಕಾರ್ಕಳದಲ್ಲಿ ಬ್ಲಾಕ್ ಕಾಂಗ್ರೆಸ್ ಹಾಗೂ ತುಳು ಸಂಘಟನೆಗಳಿಂದ ಸಂಭ್ರಮಾಚರಣೆ

“ತುಳುನಾಡಿನ ಜನರ ಬಹುದಿನಗಳ ಕನಸು ನನಸಾದ ಐತಿಹಾಸಿಕ ಕ್ಷಣ” : ಶುಭದ ರಾವ್

ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ವಿವಿಧ ತುಳು ಸಂಘಟನೆಗಳ ವತಿಯಿಂದ ಕಾರ್ಕಳದ ಅನಂತಶಯನ ವೃತ್ತದ ಬಳಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್, ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ದೊರೆತಿರುವುದು, ತುಳುನಾಡಿನ ಜನರ ಬಹುದಿನಗಳ ಕನಸು ನನಸಾದ ಐತಿಹಾಸಿಕ ಕ್ಷಣವಾಗಿದೆ. ತುಳು ಭಾಷೆ, ಸಂಸ್ಕೃತಿ ಮತ್ತು ಪರಂಪರೆಗೆ ರಾಜ್ಯ ಸರ್ಕಾರ ನೀಡಿರುವ ಈ ಗೌರವವನ್ನು ತುಳುವರು ಹೆಮ್ಮೆಯಿಂದ ಸ್ವಾಗತಿಸುತ್ತಾರೆ. ತುಳು ಭಾಷೆಯ ಅಭಿವೃದ್ಧಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಕೈಗೊಂಡಿರುವ ಕ್ರಮ ಶ್ಲಾಘನೀಯವಾಗಿದೆ ಎಂದು ಹೇಳಿದರು.

ಮಿಯ್ಯರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ತಾರಾನಾಥ್ ಕೋಟ್ಯಾನ್ ಮಾತನಾಡಿ, ತುಳು ಕೇವಲ ಒಂದು ಭಾಷೆಯಲ್ಲ, ಅದು ತುಳುನಾಡಿನ ಜನರ ಬದುಕು, ಸಂಸ್ಕೃತಿ, ಆಚಾರ-ವಿಚಾರ ಹಾಗೂ ಪರಂಪರೆಯೊಂದಿಗೆ ಬೆಸೆದುಕೊಂಡಿರುವ ಅಪ್ಪೆ ಭಾಷೆಯಾಗಿದೆ. ತುಳುವಿಗೆ ಅಧಿಕೃತ ಸ್ಥಾನಮಾನ ದೊರೆತಿರುವುದು ಪ್ರತಿಯೊಬ್ಬ ತುಳು ಅಭಿಮಾನಿಗೂ ಹೆಮ್ಮೆಯ ಸಂಗತಿಯಾಗಿದೆ. ಮುಂದಿನ ದಿನಗಳಲ್ಲಿ ತುಳು ಭಾಷೆಯ ಬೆಳವಣಿಗೆ ಹಾಗೂ ಸಂರಕ್ಷಣೆಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಹೇಳಿದರು.

ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರೆತಿರುವ ಹಿನ್ನೆಲೆಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಗೋಪಿನಾಥ್ ಭಟ್, ಸುಭಿತ್.ಎನ್.ಆರ್, ಕೆ.ಎಮ್.ಎಪ್ ನಿರ್ದೇಶಕ ಸುಧಾಕರ ಶೆಟ್ಟಿ ಮುಡಾರು, ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಶ್ರೀಮತಿ ಭಾನು ಬಾಸ್ಕರ ಪೂಜಾರಿ, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ದೇವಾಡಿಗ, ನಗರ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಶ್ರೀಮತಿ ರೀನಾ‌ ಡಿಸೋಜ, ಸುನಿಲ್ ಭಂಡಾರಿ, ಸಂತೋಷ್ ದೇವಾಡಿಗ, ಪ್ರದೀಪ್ ಬೇಲಾಡಿ,

ಕಾಂಗ್ರೆಸ್ ಕಾರ್ಯಕರ್ತರು, ತುಳು ಸಂಘಟನೆಗಳ ಪ್ರಮುಖರು, ತುಳು ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಪಟಾಕಿ ಸಿಡಿಸಿ ಹಾಗೂ ಸಿಹಿ ಹಂಚಿ ಸರ್ಕಾರದ ನಿರ್ಧಾರವನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page