
ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಪ್ಟೆಂಬರ್ 22ರಂದು ಕರಾವಳಿ ಮತ್ತು ಉತ್ತರ ಒಳನಾಡು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯ ಸಾಧ್ಯತೆ ಇದೆ. ಉಡುಪಿ ಭಾಗಗಳಲ್ಲಿ ಸಾಧಾರಣ ಮಳೆ ಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಗದಗ ,ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ.
ಬೆಂಗಳೂರು ,ಬೆಂಗಳೂರು ಗ್ರಾಮಾಂತರ ,ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ ,ಮಂಡ್ಯ, ಮೈಸೂರು ,ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆ ಯಾಗಲಿದೆ.






























































































































