ಬಿಪಿಎಲ್ ಕಾರ್ಡುದಾರರಿಗೆ ಉಚಿತ ಕನ್ನಡಕ

ಕಾರ್ಕಳ: ಅಲೋಕಾ ವಿಷನ್ ಫೌಂಡೇಶನ್ ಸಹಯೋಗದಲ್ಲಿ ಲಯನ್ಸ್ ಕ್ಲಬ್ ಕಾರ್ಕಳ ಹಾಗೂ ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಸೆಪ್ಟೆಂಬರ್ 27ರಂದು ಉಚಿತ ದೃಷ್ಟಿ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಶಿಬಿರವು ಕಾರ್ಕಳದ ಕಾಲೇಜು ರಸ್ತೆಯ ಅನಂತಶಯನ ದೇವಸ್ಥಾನದ ಹಿಂಭಾಗದಲ್ಲಿರುವ ರೋಟರಿ ಬಾಲಭವನದಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ.
ಶಿಬಿರದಲ್ಲಿ ದೃಷ್ಟಿ ತಪಾಸಣೆ ಸೇರಿದಂತೆ ವಿವಿಧ ಕಣ್ಣಿನ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಕನ್ನಡಕ ವಿತರಿಸುವ ವ್ಯವಸ್ಥೆಯೂ ಇರಲಿದೆ.
ದೃಷ್ಟಿ ಸಮಸ್ಯೆ ಹೊಂದಿರುವ ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.































































































































