
ಕಾರ್ಕಳ: ಕಾರ್ಕಳ ತಾಲೂಕು ಪ್ರಭಾರ ತಹಸೀಲ್ದಾರ್ ಹುದ್ದೆಗೆ ಹೆಬ್ರಿ ತಹಸೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ಅವರನ್ನು ನೇಮಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.
ಹೆಬ್ರಿ ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ಅವರು ಸೆಪ್ಟೆಂಬರ್ 30ರವರೆಗೆ ಕಾರ್ಕಳ ತಹಸೀಲ್ದಾರ್ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಈ ಅವಧಿಗೆ ಮಾತ್ರ ಅನ್ವಯವಾಗುವಂತೆ ನೇಮಕಾತಿ ಆದೇಶ ನೀಡಲಾಗಿದೆ.
ಇದೇ ವೇಳೆ ಕಾರ್ಕಳದ ಹಿಂದಿನ ತಹಸೀಲ್ದಾರ್ ಪ್ರದೀಪ್ ಆರ್. ಅವರಿಗೆ ವೈಯಕ್ತಿಕ ಕಾರಣಗಳಿಗಾಗಿ ರಜೆ ಮಂಜೂರು ಮಾಡಲಾಗಿದೆ. ರಜೆ ಅವಧಿಯಲ್ಲಿ ಕೇಂದ್ರ ಸ್ಥಾನದಿಂದ ತೆರಳಲು ಕೂಡ ಅವರಿಗೆ ಅನುಮತಿ ನೀಡಲಾಗಿದೆ.































































































































