
ಸಮೃದ್ಧಿ ಫೌಂಡೇಶನ್ ಕಾರ್ಕಳ ಹಾಗೂ ಕೆ. ಕೆ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇವರ ಸಯುಕ್ತ ಆಶ್ರಯದಲ್ಲಿ ನಡೆದ ಉಭಯ ಜಿಲ್ಲಾ ಮಟ್ಟದ ಅಂತರ್ ಶಾಲಾ ಚಿತ್ರಕಲಾ ಸ್ಪರ್ಧೆಯಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ 7ನೇ ತರಗತಿಯ ಸಾತ್ವಿಕ್ ಶೆಟ್ಟಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.
ಇವರನ್ನು ಶಾಲಾ ಅಧ್ಯಕ್ಷರು, ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.































































































































