29.3 C
Udupi
Wednesday, September 23, 2026
spot_img
spot_img
HomeBlogಕಸ್ತೂರಿರಂಗನ್ ವರದಿ: ಗ್ರಾಮವಾರು, ಸರ್ವೇ ನಂಬರ್‌ವಾರು ಭೌತಿಕ ಸಮೀಕ್ಷೆಗೆ ರಾಜ್ಯ ಸರ್ಕಾರ ನಿರ್ಧಾರ

ಕಸ್ತೂರಿರಂಗನ್ ವರದಿ: ಗ್ರಾಮವಾರು, ಸರ್ವೇ ನಂಬರ್‌ವಾರು ಭೌತಿಕ ಸಮೀಕ್ಷೆಗೆ ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಕಸ್ತೂರಿರಂಗನ್ ವರದಿ ವ್ಯಾಪ್ತಿಗೆ ಒಳಪಡುವ ಪ್ರದೇಶಗಳ ಕುರಿತು ಗ್ರಾಮ ಹಾಗೂ ಸರ್ವೇ ನಂಬರ್‌ವಾರು ಭೌತಿಕ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಪ್ರತಿ ಗ್ರಾಮದ ಮನೆ, ಶಾಲೆ, ತೋಟಗಾರಿಕೆ, ಕುಡಿಯುವ ನೀರು ಹಾಗೂ ವಿದ್ಯುತ್ ಕಂಬಗಳ ವಿವರ ಒಳಗೊಂಡ ನಕ್ಷೆ ಸಿದ್ಧಪಡಿಸಲಾಗುವುದು. ಬಫರ್‌ಜೋನ್‌ನಲ್ಲಿರುವವರಿಗೆ ಮನೆ ಒದಗಿಸಲು ಸೂಕ್ತ ಮಾರ್ಗಸೂಚಿ ರೂಪಿಸಲಾಗುವುದು ಎಂದರು.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ರೈತರು ಹಾಗೂ ಸ್ಥಳೀಯ ನಿವಾಸಿಗಳನ್ನು ಸ್ಥಳಾಂತರ ಮತ್ತು ಅನಗತ್ಯ ಕಿರುಕುಳದಿಂದ ರಕ್ಷಿಸುವುದರ ಜತೆಗೆ ಅರಣ್ಯ ಹಾಗೂ ಪರಿಸರ ಸಂರಕ್ಷಣೆಯೂ ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು. ಪರಿಸರ ಸೂಕ್ಷ್ಮ ಪ್ರದೇಶ, ಅರಣ್ಯ, ಕೃಷಿ, ತೋಟಗಾರಿಕೆ ಮತ್ತು ಜನವಸತಿ ಪ್ರದೇಶಗಳನ್ನು ವೈಜ್ಞಾನಿಕವಾಗಿ ಗುರುತಿಸಲು ಸಮಿತಿ ಮೂಲಕ ಸಮೀಕ್ಷೆ ನಡೆಸಲಾಗುವುದು. ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಸಮಿತಿಗಳನ್ನು ರಚಿಸಲು ನಿರ್ಧರಿಸಲಾಗಿದೆ ಎಂದರು.

ಜುಲೈ 27ರಂದು ಕೇಂದ್ರ ಸರ್ಕಾರ ಹೊರಡಿಸಿರುವ ಏಳನೇ ಕರಡು ESA ಅಧಿಸೂಚನೆಯಲ್ಲಿ ಕರ್ನಾಟಕದ 10 ಜಿಲ್ಲೆಗಳ 1,449 ಗ್ರಾಮಗಳ 20,668 ಚದರ ಕಿ.ಮೀ. ಪ್ರದೇಶವನ್ನು ಗುರುತಿಸಲಾಗಿದೆ. ಉಪಗ್ರಹ ಆಧಾರಿತ ಸಮೀಕ್ಷೆ ಸ್ಥಳೀಯ ವಾಸ್ತವಾಂಶಗಳನ್ನು ಪರಿಗಣಿಸಿಲ್ಲ. ಆದ್ದರಿಂದ ಕರಡನ್ನು ಯಥಾಸ್ಥಿತಿಯಲ್ಲಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು.

ಉಪಗ್ರಹ ಚಿತ್ರಗಳಲ್ಲಿ ಅರಣ್ಯ ಹಾಗೂ ಕೃಷಿ-ತೋಟಗಾರಿಕೆ ಪ್ರದೇಶಗಳು ಒಂದೇ ರೀತಿಯಲ್ಲಿ ಕಾಣುವುದರಿಂದ ಗೊಂದಲ ಉಂಟಾಗಿದೆ. ಗ್ರಾಮದ ಒಂದು ಭಾಗ ಅರಣ್ಯ ಪ್ರದೇಶದಲ್ಲಿದೆ ಎಂಬ ಕಾರಣಕ್ಕೆ ಇಡೀ ಗ್ರಾಮವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸುವುದು ಸೂಕ್ತವಲ್ಲ. ಇದರಿಂದ ಮನೆ ನಿರ್ಮಾಣ, ಕೃಷಿ, ರಸ್ತೆ, ಶಾಲೆ, ಆಸ್ಪತ್ರೆ ಹಾಗೂ ಕುಡಿಯುವ ನೀರಿನಂತಹ ಮೂಲಸೌಕರ್ಯಗಳಿಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಕೇಂದ್ರ ಸರ್ಕಾರದೊಂದಿಗೆ ಈ ಕುರಿತು ಚರ್ಚಿಸಲು ಸರ್ವಪಕ್ಷ ನಿಯೋಗ ಕೊಂಡೊಯ್ಯುವುದು, ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಭೇಟಿಯಾಗುವುದು ಮತ್ತು ಅಗತ್ಯವಿದ್ದರೆ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರನ್ನು ನೇಮಿಸುವ ಕುರಿತು ಸಭೆಯಲ್ಲಿ ಸಹಮತ ವ್ಯಕ್ತವಾಗಿದೆ. ಕರ್ನಾಟಕದ ಎಲ್ಲ ಸಂಸದರು ಪಕ್ಷಭೇದ ಮರೆತು ರಾಜ್ಯದ ನಿಲುವನ್ನು ಕೇಂದ್ರದ ಮುಂದೆ ಮಂಡಿಸಬೇಕು ಎಂದು ಶಿವಕುಮಾರ್ ಮನವಿ ಮಾಡಿದರು.

2004ರಿಂದಲೂ ಪರಿಸರ ಸೂಕ್ಷ್ಮ ಪ್ರದೇಶದ ಕರಡುಗಳ ಕುರಿತು ರಾಜ್ಯ ಸರ್ಕಾರ ಆಕ್ಷೇಪ ಸಲ್ಲಿಸುತ್ತಿದೆ. 2021, 2022 ಹಾಗೂ 2024ರಲ್ಲಿಯೂ ಸಚಿವ ಸಂಪುಟದ ನಿಲುವನ್ನು ಕೇಂದ್ರಕ್ಕೆ ತಿಳಿಸಲಾಗಿದೆ. ಈವರೆಗೆ ಆರು ಕರಡು ಅಧಿಸೂಚನೆಗಳನ್ನು ರಾಜ್ಯ ಸರ್ಕಾರ ವಿರೋಧಿಸಿದೆ ಎಂದು ಅವರು ತಿಳಿಸಿದರು.

ಪಶ್ಚಿಮ ಘಟ್ಟದ ಪರಿಸರ, ಜೀವವೈವಿಧ್ಯ, ನದಿಗಳ ಮೂಲ ಹಾಗೂ ವನ್ಯಜೀವಿಗಳನ್ನು ಸಂರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಅದೇ ವೇಳೆ ಹಲವು ತಲೆಮಾರುಗಳಿಂದ ಪಶ್ಚಿಮ ಘಟ್ಟದಲ್ಲಿ ವಾಸಿಸುತ್ತಿರುವ ರೈತರು, ತೋಟಗಾರರು, ಆದಿವಾಸಿಗಳು ಹಾಗೂ ಸ್ಥಳೀಯ ಕುಟುಂಬಗಳಿಗೆ ತೊಂದರೆಯಾಗಬಾರದು. ಮಂಜೂರಾದ ಪ್ರದೇಶಗಳನ್ನು ವರದಿ ವ್ಯಾಪ್ತಿಗೆ ಸೇರಿಸಬಾರದು ಮತ್ತು ಪುನರ್ವಸತಿ ವ್ಯವಸ್ಥೆ ಇಲ್ಲದೆ ತೆರವುಗೊಳಿಸಬಾರದು ಎಂದು ಹೇಳಿದರು.

ಬಗರ್‌ಹುಕುಂ, ಅರಣ್ಯ ಹಕ್ಕು ಕಾಯ್ದೆ, ಡೀಮ್ಡ್ ಫಾರೆಸ್ಟ್, ಭೂಮಂಜೂರಾತಿ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಪರಿಶೀಲಿಸದೆ ಸ್ಥಳೀಯರ ವಿರುದ್ಧ ಕ್ರಮ ಕೈಗೊಳ್ಳಬಾರದು ಎಂದ ಅವರು, ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನ ಕುರಿತು ಶೀಘ್ರ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಮಾನವ-ವನ್ಯಜೀವಿ ಸಂಘರ್ಷ ತಡೆಗೂ ಸರ್ಕಾರ ಕ್ರಮ ಕೈಗೊಂಡಿದೆ. ಅರಣ್ಯ ಪ್ರದೇಶಗಳಲ್ಲಿ ಹೊಸ ಒತ್ತುವರಿಗೆ ಅವಕಾಶ ನೀಡದಂತೆ ಸೂಚಿಸಲಾಗಿದ್ದು, ಕಾಡಂಚಿನ ನಿವಾಸಿಗಳು ತಮ್ಮ ಬಳಿಯಿರುವ ಬಂದೂಕುಗಳನ್ನು ನವೆಂಬರ್ 1ರೊಳಗೆ ಪೊಲೀಸ್ ಠಾಣೆಗೆ ಒಪ್ಪಿಸಬೇಕು. ಪರವಾನಗಿ ಹೊಂದಿರುವವರಿಗೆ ನಿಯಮಾನುಸಾರ ಅವುಗಳನ್ನು ಹಿಂತಿರುಗಿಸಲಾಗುವುದು ಎಂದರು.

ಅಕ್ರಮ ಬೇಟೆ ತಡೆ ಹಾಗೂ ವನ್ಯಜೀವಿ ಸಂರಕ್ಷಣೆಗೆ ಆಧುನಿಕ ತಂತ್ರಜ್ಞಾನ, ಕ್ಯಾಮೆರಾಗಳು ಮತ್ತು ಆನೆಗಳ ಚಲನವಲನದ ಮೇಲ್ವಿಚಾರಣಾ ವ್ಯವಸ್ಥೆ ಬಳಸಲಾಗುತ್ತಿದೆ. ಪರಿಸರ ಸಂರಕ್ಷಣೆ ಮತ್ತು ರೈತರ ಬದುಕು ಎರಡನ್ನೂ ಗಮನದಲ್ಲಿಟ್ಟುಕೊಂಡು ಸರ್ಕಾರ ಕಾರ್ಯನಿರ್ವಹಿಸಲಿದೆ ಎಂದು ಶಿವಕುಮಾರ್ ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page