28.1 C
Udupi
Wednesday, September 23, 2026
spot_img
spot_img
HomeBlogಮಹಿಳಾ ಸಿಬ್ಬಂದಿಗೆ ಕೆಲಸದ ಸ್ಥಳದಲ್ಲಿ ಸುರಕ್ಷತೆ ಇದೆಯೇ? ತನಿಖೆಗೆ ರಮಿತಾ ಸೂರ್ಯವಂಶಿ ಆಗ್ರಹ

ಮಹಿಳಾ ಸಿಬ್ಬಂದಿಗೆ ಕೆಲಸದ ಸ್ಥಳದಲ್ಲಿ ಸುರಕ್ಷತೆ ಇದೆಯೇ? ತನಿಖೆಗೆ ರಮಿತಾ ಸೂರ್ಯವಂಶಿ ಆಗ್ರಹ

ಕಾರ್ಕಳ: ಕಾರ್ಕಳ ತಾಲೂಕು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಮಹಿಳಾ ಸಿಬ್ಬಂದಿಯೊಂದಿಗೆ ತಹಶೀಲ್ದಾರರ ವರ್ತನೆ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೂ ದೂರು ಸಲ್ಲಿಸಲಾಗಿದೆ ಎಂಬ ಮಾಹಿತಿ ಸಾರ್ವಜನಿಕವಾಗಿ ಲಭ್ಯವಾಗಿದೆ.ಈ ಕುರಿತು ರಮಿತಾ ಸೂರ್ಯವಂಶಿ ಅವರು, ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿ ಗೌರವ, ಸುರಕ್ಷತೆ ಹಾಗೂ ಭಯಮುಕ್ತ ವಾತಾವರಣ ಕಲ್ಪಿಸುವುದು ಪ್ರತಿಯೊಬ್ಬ ಅಧಿಕಾರಿಯ ಕರ್ತವ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೂರುಗಳಲ್ಲಿ ಲೈಂಗಿಕ ಕಿರುಕುಳ ಸೇರಿದಂತೆ ಗಂಭೀರ ಆರೋಪಗಳು ಉಲ್ಲೇಖವಾಗಿವೆ ಎನ್ನಲಾಗುತ್ತಿದ್ದು, ಈ ಆರೋಪಗಳು ಸತ್ಯವೇ ಅಥವಾ ಅಲ್ಲವೇ ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ನಿಷ್ಪಕ್ಷಪಾತ ತನಿಖೆಯ ಮೂಲಕ ಸ್ಪಷ್ಟಪಡಿಸಬೇಕಾಗಿದೆ ಎಂದು ರಮಿತಾ ಸೂರ್ಯವಂಶಿ ಅವರು ಆಗ್ರಹಿಸಿದ್ದಾರೆ.ಈಗಾಗಲೇ ದೂರುಗಳು ಸಲ್ಲಿಕೆಯಾಗಿದ್ದರೆ, ಈ ಕುರಿತು ಸಮರ್ಪಕ ಹಾಗೂ ಪಾರದರ್ಶಕ ತನಿಖೆ ನಡೆದಿದೆಯೇ? ಆರೋಪಗಳು ಕೇಳಿಬಂದಿರುವ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ? ದೂರು ನೀಡಿರುವ ಮಹಿಳಾ ಸಿಬ್ಬಂದಿಯ ಸುರಕ್ಷತೆ ಹಾಗೂ ಗೌಪ್ಯತೆಗಾಗಿ ಯಾವ ಕ್ರಮ ಕೈಗೊಳ್ಳಲಾಗಿದೆ? ಎಂಬ ಪ್ರಶ್ನೆಗಳು ಸಾರ್ವಜನಿಕರಲ್ಲಿ ಮೂಡಿವೆ.ಮಹಿಳಾ ಸಿಬ್ಬಂದಿಗೆ ಕೆಲಸದ ಸ್ಥಳದಲ್ಲೇ ಸುರಕ್ಷತೆ ಇಲ್ಲ ಎಂಬ ಭಾವನೆ ಮೂಡುವಂತಾಗಬಾರದು. ಯಾವುದೇ ಮಹಿಳೆ ತನ್ನ ಮೇಲೆ ಅನ್ಯಾಯ ಅಥವಾ ಕಿರುಕುಳವಾಗಿದೆ ಎಂದು ಹೇಳಲು ಭಯಪಡುವ ಪರಿಸ್ಥಿತಿ ಇರಬಾರದು. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ನಿಷ್ಪಕ್ಷಪಾತ ಹಾಗೂ ಶೀಘ್ರ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ದೂರು ನೀಡಿರುವ ಮಹಿಳೆಯರ ಗೌಪ್ಯತೆ ಹಾಗೂ ಗೌರವವನ್ನು ಸಂಪೂರ್ಣವಾಗಿ ಕಾಪಾಡಬೇಕು. ತನಿಖೆಯಲ್ಲಿ ಆರೋಪಗಳು ಸಾಬೀತಾದಲ್ಲಿ ಕಾನೂನು ಮತ್ತು ಇಲಾಖಾ ನಿಯಮಗಳ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಅದೇ ವೇಳೆ, ಆರೋಪಗಳು ಸಾಬೀತಾಗುವವರೆಗೆ ಯಾವುದೇ ವ್ಯಕ್ತಿಯನ್ನು ತಪ್ಪಿತಸ್ಥರೆಂದು ಪರಿಗಣಿಸದೆ, ತನಿಖೆಯ ಫಲಿತಾಂಶದ ಆಧಾರದ ಮೇಲೆ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.“ಮಹಿಳೆಯರ ಸುರಕ್ಷತೆ ಯಾವುದೇ ಕಾರಣಕ್ಕೂ ರಾಜಿಯಾಗುವ ವಿಷಯವಲ್ಲ. ಮಹಿಳೆಯರಿಗೆ ನ್ಯಾಯ, ರಕ್ಷಣೆ ಹಾಗೂ ಆತ್ಮವಿಶ್ವಾಸ ದೊರೆಯುವಂತಹ ವಾತಾವರಣ ನಿರ್ಮಾಣವಾಗಬೇಕು. ಯಾವುದೇ ರೀತಿಯ ಅನ್ಯಾಯ ಅಥವಾ ಕಿರುಕುಳ ಎದುರಾದಲ್ಲಿ ಕಾನೂನುಬದ್ಧವಾಗಿ ಧೈರ್ಯದಿಂದ ದೂರು ನೀಡಲು ಮಹಿಳೆಯರು ಮುಂದೆ ಬರಬೇಕು” ಎಂದು ರಮಿತಾ ಸೂರ್ಯವಂಶಿ ಅವರು ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page