25.3 C
Udupi
Thursday, September 24, 2026
spot_img
spot_img
HomeBlogಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ: ಮುಖ ಚಹರೆ ಗುರುತಿಸುವಿಕೆ ಕಡ್ಡಾಯ

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ: ಮುಖ ಚಹರೆ ಗುರುತಿಸುವಿಕೆ ಕಡ್ಡಾಯ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ₹ 2,000 ಸಹಾಯಧನ ತಲುಪುವುದನ್ನು ಖಚಿತಪಡಿಸಲು ಕರ್ನಾಟಕ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಹಾಗೂ ಪ್ರಮಾಣಿತ ಕಾರ್ಯವಿಧಾನ (SOP) ಜಾರಿಗೊಳಿಸಿದೆ. ಇದರ ಭಾಗವಾಗಿ ಫಲಾನುಭವಿಗಳ ಮರುಪರಿಶೀಲನೆ ನಡೆಸಲಾಗುತ್ತದೆ.

ಹೊಸ ನಿಯಮದಂತೆ ಗಣತಿದಾರರು ಹಾಗೂ ಗ್ಯಾರಂಟಿ ಸಮಿತಿಗಳ ಸದಸ್ಯರು ಮನೆಮನೆಗೆ ಭೇಟಿ ನೀಡಿ ಫಲಾನುಭವಿಗಳ ಮಾಹಿತಿ ಸಂಗ್ರಹಿಸಲಿದ್ದಾರೆ. ಕುಟುಂಬದ ಯಜಮಾನಿ ಹಾಗೂ ಅರ್ಜಿಯಲ್ಲಿ ನಮೂದಿಸಿರುವ ವಿವರಗಳನ್ನು ಪರಿಶೀಲಿಸಿ ನಿಗದಿತ ನಮೂನೆಯಲ್ಲಿ ದಾಖಲಿಸಲಾಗುತ್ತದೆ.

ಮುಖ ಚಹರೆ ಗುರುತಿಸುವಿಕೆ ಕಡ್ಡಾಯ:
ಫಲಾನುಭವಿಗಳ ಗುರುತು ದೃಢೀಕರಣಕ್ಕೆ ಆಧಾರ್ ಪರಿಶೀಲನೆಯೊಂದಿಗೆ ಮುಖಚಹರೆ ಗುರುತಿಸುವಿಕೆ ವ್ಯವಸ್ಥೆಯನ್ನೂ ಬಳಸಲಾಗುತ್ತದೆ. ಮನೆ ಭೇಟಿ ಸಂದರ್ಭದಲ್ಲಿ ಜಿಪಿಎಸ್ ಮೂಲಕ ಸ್ಥಳದ ಮಾಹಿತಿಯನ್ನು ಅಪ್ಲಿಕೇಶನ್‌ನಲ್ಲಿ ದಾಖಲಿಸಲಾಗುತ್ತದೆ.

ಯೋಜನೆಯಿಂದ ಸ್ವಯಂಪ್ರೇರಿತವಾಗಿ ಹೊರಗುಳಿಯಲು ಕೂಡ ಅವಕಾಶವಿದ್ದು, ಒಟಿಪಿ ಮೂಲಕ ದೃಢೀಕರಣ ಮಾಡಬಹುದು. ಈ ಕುರಿತು ಫಲಾನುಭವಿಗಳಿಗೆ ಎಸ್‌ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತದೆ.

ಅನರ್ಹರ ಪತ್ತೆಗೆ ಕ್ರಮ:
ಅನರ್ಹ, ಮೃತ, ವಲಸೆ ಹೋದ ಹಾಗೂ ನಕಲಿ ಫಲಾನುಭವಿಗಳನ್ನು ಗುರುತಿಸಿ ಪಟ್ಟಿಯಿಂದ ಕೈಬಿಡುವುದು ಮರುಪರಿಶೀಲನೆಯ ಪ್ರಮುಖ ಉದ್ದೇಶವಾಗಿದೆ. ಅರ್ಹ ಮಹಿಳೆಯರಿಗೆ ಸೌಲಭ್ಯ ಮುಂದುವರಿಸಲು ಸರ್ಕಾರ ಕ್ರಮ ಕೈಗೊಂಡಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿಯಾಗಿ ಹೆಸರು ಹೊಂದಿರುವ ಅರ್ಹ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಸೇವಾ ಸಿಂಧು ಪೋರ್ಟಲ್, ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಬಾಪುಜಿ ಸೇವಾ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.

ಅರ್ಹತೆ:
ಕರ್ನಾಟಕದ ನಿವಾಸಿಯಾಗಿದ್ದು, ಅಂತ್ಯೋದಯ, ಬಿಪಿಎಲ್ ಅಥವಾ ಎಪಿಎಲ್ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿಯಾಗಿರಬೇಕು. ಒಂದು ಕುಟುಂಬದಿಂದ ಒಬ್ಬ ಮಹಿಳೆಗೆ ಮಾತ್ರ ಸೌಲಭ್ಯ ಸಿಗಲಿದ್ದು, ಅರ್ಜಿದಾರರು ಅಥವಾ ಅವರ ಪತಿ ಆದಾಯ ತೆರಿಗೆ/ಜಿಎಸ್‌ಟಿ ಪಾವತಿದಾರರಾಗಿರಬಾರದು. ಸರ್ಕಾರಿ ನೌಕರರು ಯೋಜನೆಗೆ ಅರ್ಹರಲ್ಲ. ಆಧಾರ್‌ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಅಗತ್ಯ.

ಬೇಕಾದ ದಾಖಲೆಗಳು:
ಆಧಾರ್ ಕಾರ್ಡ್, ಪಡಿತರ ಚೀಟಿ, ಬ್ಯಾಂಕ್ ಪಾಸ್‌ಬುಕ್ ಅಥವಾ ಖಾತೆ ವಿವರ ಹಾಗೂ ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಅಗತ್ಯ.

ಆನ್‌ಲೈನ್ ಅರ್ಜಿ:
ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಅಥವಾ ಲಾಗಿನ್ ಮಾಡಿ ‘Application for Gruhalakshmi Scheme’ ಆಯ್ಕೆ ಮಾಡಬೇಕು. ಬಳಿಕ ವೈಯಕ್ತಿಕ, ಪಡಿತರ ಹಾಗೂ ಬ್ಯಾಂಕ್ ವಿವರಗಳನ್ನು ಭರ್ತಿ ಮಾಡಿ ಆಧಾರ್ ಒಟಿಪಿ ದೃಢೀಕರಣದೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಂಖ್ಯೆಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು.

ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಅಥವಾ ಬಾಪುಜಿ ಸೇವಾ ಕೇಂದ್ರಕ್ಕೆ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಬಹುದು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page