
ಬಜಗೋಳಿ: 4ನೇ ವರ್ಷದ ಬಜಗೋಳಿ ದಸರಾ ಕಾರ್ಯಕ್ರಮವು ಅಕ್ಟೋಬರ್ 19 ಮತ್ತು 20ರಂದು ವಿಜೃಂಭಣೆಯಿಂದ ನಡೆಯಲಿದೆ.ದಸರಾ ಕಾರ್ಯಕ್ರಮದ ಪೂರ್ವಸಿದ್ಧತೆಗಳ ಹಿನ್ನೆಲೆಯಲ್ಲಿ ನಡೆದ ಸಮಿತಿ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಸಮಿತಿಯ ನೂತನ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ನಲ್ಲೂರು, ಕಾರ್ಯದರ್ಶಿಯಾಗಿ ಪ್ರಶಾಂತ್ ಜೈನ್ ಮುಡಾರು ಹಾಗೂ ಕೋಶಾಧಿಕಾರಿಯಾಗಿ ರವೀಶ್ ವಿ. ಶೆಟ್ಟಿ ಆಯ್ಕೆಯಾಗಿದ್ದಾರೆ.
ಪ್ರತಿ ವರ್ಷದಂತೆ ಈ ಬಾರಿಯೂ ಬಜಗೋಳಿ ದಸರಾವನ್ನು ಅದ್ದೂರಿಯಾಗಿ ಹಾಗೂ ಸಾಂಸ್ಕೃತಿಕ ವೈಭವದೊಂದಿಗೆ ಆಚರಿಸಲು ಸಮಿತಿ ಸಿದ್ಧತೆ ನಡೆಸುತ್ತಿದೆ. ದಸರಾ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಮಿತಿ ಮನವಿ ಮಾಡಿದೆ.































































































































