27.2 C
Udupi
Friday, March 14, 2025
spot_img
spot_img
HomeBlogರಾಹುಲ್‌ ಗಾಂಧಿಗೆ ಕಸದ ಬುಟ್ಟಿಯ ಬಗ್ಗೆ ಸಾಕಷ್ಟು ಅನುಭವವಿದೆ: ಮತ್ತೆ ವಾಗ್ದಾಳಿ ನಡೆಸಿದ ಆಚಾರ್ಯ ಪ್ರಮೋದ್‌...

ರಾಹುಲ್‌ ಗಾಂಧಿಗೆ ಕಸದ ಬುಟ್ಟಿಯ ಬಗ್ಗೆ ಸಾಕಷ್ಟು ಅನುಭವವಿದೆ: ಮತ್ತೆ ವಾಗ್ದಾಳಿ ನಡೆಸಿದ ಆಚಾರ್ಯ ಪ್ರಮೋದ್‌ ಕೃಷ್ಣಂ

ಲಕ್ನೋ: ಕಾಂಗ್ರೆಸ್ ನಾಯಕ ರಾಹುಲ್ ಗಾಂದಿ ವಿರುದ್ಧ ಕಾಂಗ್ರೆಸ್‌ನ ಮಾಜಿ ನಾಯಕ ಆಚಾರ್ಯ ಪ್ರಮೋದ್‌ ಕೃಷ್ಣಂ ಅವರು ವಾಗ್ದಾಳಿ ಮುಂದುವರಿಸಿದ್ದು ಕಳೆದ 13-14 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಕಸದ ಬುಟ್ಟಿಗೆ ಎಸೆದಿರುವ ರಾಹುಲ್ ಗಾಂಧಿ ಅವರಿಗೆ ಸಾಕಷ್ಟು ಅನುಭವವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ಅಗ್ನಿವೀರ್ ಯೋಜನೆ’ಯನ್ನು ಕಸದ ಬುಟ್ಟಿಗೆ ಎಸೆಯುವುದಾಗಿ ರಾಹುಲ್ ಗಾಂಧಿ ನಿರಂತರವಾಗಿ ಹೇಳುತ್ತಿದ್ದು ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಆಚಾರ್ಯ ಪ್ರಮೋದ್ ಕೃಷ್ಣಂ ಅವರು, ರಾಹುಲ್ ಗಾಂಧಿ ಅವರಿಗೆ ಕಸದ ತೊಟ್ಟಿಗಳಲ್ಲಿ ಸಾಕಷ್ಟು ಅನುಭವವಿದೆ. ಮನಮೋಹನ್ ಜಿಯವರ ಸುಗ್ರೀವಾಜ್ಞೆಯನ್ನು ಹರಿದು ಕಸದ ಬುಟ್ಟಿಗೆ ಎಸೆದಿದ್ದರು. ಅವರು 13-14 ವರ್ಷಗಳಲ್ಲಿ ಇಡೀ ಕಾಂಗ್ರೆಸ್ ಅನ್ನು ಕಸದ ಬುಟ್ಟಿಗೆ ಎಸೆದರು ಎಂದು ತಿರುಗೇಟು ನೀಡಿದ್ದಾರೆ.

ಸೋನಿಯಾ, ರಾಜೀವ್, ಇಂದಿರಾ ಅವರ ಜೊತೆಗಿದ್ದ ಕಾಂಗ್ರೆಸ್‌ನ ದೊಡ್ಡ ನಾಯಕರನ್ನೂ ಕಸದ ಬುಟ್ಟಿಗೆ ಎಸೆಯಲಾಯಿತು. ರಾಹುಲ್ ಗಾಂಧಿ ಅವರೇ ಧೈರ್ಯ ಇದ್ದರೆ ಈ ದೇಶವನ್ನು ಕಸದ ಬುಟ್ಟಿಗೆ ಎಸೆಯಿರಿ. ಅವರೇ ಕಸದ ಒಡೆಯ. ಅವರು ಯಾರನ್ನೂ ಕಸದ ಬುಟ್ಟಿಗೆ ಎಸೆಯಬಹುದು. ಸನಾತನವನ್ನು ಕಸದ ಬುಟ್ಟಿಗೆ ಎಸೆಯಲು ಬಯಸುತ್ತಾರೆ ಎಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page