
ರಾಜ್ಯದ ಹಲವೆಡೆ ಮತ್ತೆ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆ. 27 ಮತ್ತು 28ರಂದು ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆ ಯಾಗಲಿದೆ. ಕರಾವಳಿ ಕರ್ನಾಟಕದ ಉಡುಪಿ ದಕ್ಷಿಣ ಕನ್ನಡ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಯಾಗಲಿದೆ. ಉತ್ತರ ಒಳನಾಡಿನ ಧಾರವಾಡ ಗದಗ ಹಾವೇರಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ.
ಶಿವಮೊಗ್ಗ ,ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.































































































































