
ರಾಜ್ಯದಲ್ಲಿ ಇಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಭಾಗಗಳಲ್ಲಿ ಅಕ್ಟೋಬರ್ 1ರಂದು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ದಕ್ಷಿಣ ಕನ್ನಡ ,ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆ ಯಾಗಲಿದೆ.
ಬೆಳಗಾವಿ ಧಾರವಾಡ ಗದಗ ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.



































