
ರಾಜ್ಯದ ಹಲವೆಡೆ ಅಕ್ಟೋಬರ್ 2 ಮತ್ತು ಮೂರರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ,ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ,ದಾವಣಗೆರೆ, ಹಾಸನ, ಕೊಡಗು, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.





















