
ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಅಕ್ಟೋಬರ್ 2ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್. ಕಾಮತ್ ಹಾಗೂ ಶಿಕ್ಷಕ- ಶಿಕ್ಷಕಿಯರು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಲ್ಲಿಸಿದರು.





















