
ಕಾರ್ಕಳದ ಮಾಧವ ನಗರದಲ್ಲಿರುವ ಶ್ರೀ ಭುವನೇಂದ್ರ ರೆಸಿಡೆನ್ಶಿಯಲ್ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.
ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕರು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಶಾಲಾ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಗಾಂಧೀಜಿಯವರ ಕನಸಾದಂತಹ ಸ್ವಚ್ಛ ಭಾರತ ಅಭಿಯಾನಕ್ಕೆ ಅಳಿಸೇವೆಯನ್ನು ಸಲ್ಲಿಸಿದರು. ಹತ್ತನೇ ತರಗತಿಯ ರಿಷಿತಾ ಮಹಾತ್ಮ ಗಾಂಧೀಜಿಯವರ ಪರಿಚಯ ಹಾಗೂ ಮಾಹಿತಿ ವಾಚನವನ್ನು ಮಾಡಿದರೆ,ಸಿರಿಜಾ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪರಿಚಯ ಹಾಗೂ ಮಾಹಿತಿ ವಾಚನ ಮಾಡಿದರು.ವೈಷ್ಣವಿ ಕಾರ್ಯಕ್ರಮವನ್ನು ನಿರೂಪಿಸಿದರು.






















