
ರಾಜ್ಯದಲ್ಲಿ ಮುಂಗಾರು ಚುರುಕುಕೊಂಡಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರೆಯಲಿದೆ. ಕರಾವಳಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಭಾಗಗಳಲ್ಲಿ ಯೆಲ್ಲೋ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಶಿವಮೊಗ್ಗ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ.
ಉತ್ತರ ಒಳನಾಡಿನ ಹಾವೇರಿ, ಗದಗ ,ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾ ಮುನ್ಸೂಚನೆ ನೀಡಲಾಗಿದೆ.






















