30.1 C
Udupi
Monday, October 5, 2026
spot_img
spot_img
HomeBlogಕರಾವಳಿಯಲ್ಲಿ ಮಳೆ ಅಬ್ಬರ: ಅ.10ರವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ

ಕರಾವಳಿಯಲ್ಲಿ ಮಳೆ ಅಬ್ಬರ: ಅ.10ರವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸೋಮವಾರ ಮುಂಜಾನೆ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಸುಳ್ಯ ತಾಲೂಕನ್ನು ಹೊರತುಪಡಿಸಿ ಕರಾವಳಿಯ ಹಲವು ಪ್ರದೇಶಗಳಲ್ಲಿ ಮಳೆಯಾಗಿದ್ದು, ದಕ್ಷಿಣ ಕನ್ನಡದ ಘಟ್ಟ ಪ್ರದೇಶಗಳಲ್ಲಿ ಭಾನುವಾರ ಸಂಜೆ ಗುಡುಗು ಸಹಿತ ಮಳೆ ಸುರಿದಿದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗದ ಕರಾವಳಿ ಭಾಗಕ್ಕೆ ಹೊಂದಿಕೊಂಡಿರುವ ತಾಲೂಕುಗಳಲ್ಲೂ ಮಳೆಯಾಗಿದೆ.

ಇಂದು ಕರಾವಳಿ ಜಿಲ್ಲೆಗಳಲ್ಲಿ ಮೇಲ್ಮೈ ಸುಳಿಗಾಳಿಗಳ ಪ್ರಭಾವದಿಂದ ದಿನವಿಡೀ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಗುಡುಗು ಸಹಿತ ತುಂತುರುದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ತೀರದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಬಹುದು. ಮಧ್ಯಾಹ್ನದ ಬಳಿಕ ಮಳೆ ಕಡಿಮೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಘಟ್ಟ ಪ್ರದೇಶಗಳಲ್ಲಿ ಸಂಜೆ ಮಳೆ ಬೀಳುವ ಮುನ್ಸೂಚನೆ ಇದ್ದರೂ, ಪಶ್ಚಿಮ ಗಾಳಿ ಹೆಚ್ಚಾದರೆ ಪೂರ್ವ ಭಾಗದ ಮೋಡಗಳು ಕಡಿಮೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 10ರವರೆಗೆ ಕರಾವಳಿಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ ಮುಂದುವರಿಯಬಹುದು.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯ ನಿರೀಕ್ಷೆಯಿದೆ. ಸಾಗರ, ಹೊಸನಗರ, ತೀರ್ಥಹಳ್ಳಿ, ಶೃಂಗೇರಿ, ಮೂಡಿಗೆರೆ, ಸಕಲೇಶಪುರ ಹಾಗೂ ಮಡಿಕೇರಿ ತಾಲೂಕುಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಒಂದೆರಡು ದಿನ ಸಾಧಾರಣ ಮಳೆಯ ಬಳಿಕವೂ ಅ.10ರವರೆಗೆ ಅಲ್ಲಲ್ಲಿ ಮಳೆ ಮುಂದುವರಿಯಬಹುದು.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೆರಡು ದಿನ ಈ ಭಾಗಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ನೀಡಲಾಗಿದೆ.

ಅಕ್ಟೋಬರ್‌ನಲ್ಲಿ ಮುಂಗಾರು ಹಿಂತೆಗೆದುಕೊಳ್ಳುವ ಹಂತದಲ್ಲಿ ಬಂಗಾಳ ಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ಸಣ್ಣ ಪ್ರಮಾಣದ ಸೈಕ್ಲೋನಿಕ್ ಸರ್ಕ್ಯುಲೇಷನ್‌ಗಳು ಸಾಮಾನ್ಯವಾಗಿ ಕಂಡುಬರುತ್ತವೆ. ಇವುಗಳಿಂದ ತೇವಾಂಶಯುಕ್ತ ಮೋಡ ಹಾಗೂ ಗಾಳಿಯು ದಕ್ಷಿಣ ಭಾರತಕ್ಕೆ ಪ್ರವೇಶಿಸಿ ಕೇರಳ, ಕರ್ನಾಟಕ ಮತ್ತು ತಮಿಳುನಾಡಿನ ಕೆಲವೆಡೆ ಮಳೆಗೆ ಕಾರಣವಾಗುತ್ತದೆ. ಕರಾವಳಿಯಲ್ಲಿ ಮುಂದಿನ ಕೆಲವು ದಿನ ಸಂಜೆ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಇದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page