
ಕಾರ್ಕಳ: ಶ್ರೀ ಮಾರಿಯಮ್ಮ ದೇವಸ್ದಾನದಲ್ಲಿ ನವರಾತ್ರಿ ಮಹೋತ್ಸವವು ದಿನಾಂಕ 11.10.2026 ರಿಂದ 20.10.2026ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ.
ಪ್ರತಿದಿನ ಸಂಜೆ 5.30ರಿಂದ 7.30ರವರೆಗೆ ಮಾರಿಯಮ್ಮ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು ಅಕ್ಟೋಬರ್ 20ರಂದು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಮಹಾ ಚಂಡಿಕಾಯಾಗ ಹಾಗೂ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನೆರವೇರಲಿದೆ. ಅನ್ನದಾನದ ಕಾಣಿಕೆಯಾಗಿ ಅಕ್ಕಿ, ಬೇಳೆ, ತರಕಾರಿ, ತೆಂಗಿನಕಾಯಿ, ಬೆಲ್ಲ ಸೇರಿದಂತೆ ವಿವಿಧ ವಸ್ತುಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನವರಾತ್ರಿ ಮಹೋತ್ಸವವನ್ನು ಯಶಸ್ವಿಗೊಳಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿದೆ.






















