
ರಾಜ್ಯದಲ್ಲಿ ಮುಂಗಾರು ದುರ್ಬಲ ಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹಾವೆ ಮುಂದುವರಿಯುವ ಸಾಧ್ಯತೆ ಇದೆ. ಬಾಗಲಕೋಟೆ ಬೆಳಗಾವಿ ಬೀದರ್ ಗದಗ ಹಾವೇರಿ ಕಲಬುರಗಿ ಕೊಪ್ಪಳ ರಾಯಚೂರು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಅ. 9ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.






















